ADVERTISEMENT

ನವೆಂಬರ್‌ನಲ್ಲಿ ಪ್ರಯಾಣಿಕ ವಾಹನ ಮಾರಾಟ ಶೇ 4ರಷ್ಟು ಹೆಚ್ಚಳ

ಪಿಟಿಐ
Published 12 ಡಿಸೆಂಬರ್ 2023, 15:52 IST
Last Updated 12 ಡಿಸೆಂಬರ್ 2023, 15:52 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ನವದೆಹಲಿ: ಯುಟಿಲಿಟಿ ವಾಹನಗಳಿಗೆ ಬೇಡಿಕೆ ಹೆಚ್ಚಾಗಿರುವುದರಿಂದ ದೇಶೀಯ ಪ್ರಯಾಣಿಕ ವಾಹನಗಳ ಸಗಟು ಮಾರಾಟವು ನವೆಂಬರ್‌ನಲ್ಲಿ ಶೇ 4ರಷ್ಟು ಏರಿಕೆ ಆಗಿದೆ ಎಂದು ಭಾರತೀಯ ವಾಹನ ತಯಾರಕರ ಒಕ್ಕೂಟವು (ಎಸ್‌ಐಎಎಂ) ಮಂಗಳವಾರ ತಿಳಿಸಿದೆ.

ನವೆಂಬರ್‌ನಲ್ಲಿ 3.34 ಲಕ್ಷ ವಾಹನಗಳು ಮಾರಾಟವಾಗಿವೆ. ಹಿಂದಿನ ವರ್ಷದ ಇದೇ ತಿಂಗಳಲ್ಲಿ 3.22 ಲಕ್ಷ ವಾಹನಗಳು ಮಾರಾಟ ಆಗಿದ್ದವು.

ನವೆಂಬರ್‌ನಲ್ಲಿ ದ್ವಿಚಕ್ರ ವಾಹನಗಳ ಮಾರಾಟವು ಕಳೆದ ಅವಧಿಗೆ ಹೋಲಿಸಿದರೆ ಶೇ 31ರಷ್ಟು ಹೆಚ್ಚಾಗಿ, 16.23 ಲಕ್ಷಕ್ಕೆ ತಲುಪಿದೆ. ಕಳೆದ ವರ್ಷದ ಇದೇ ಅವಧಿಯಲ್ಲಿ 12.36 ಲಕ್ಷ ವಾಹನಗಳು ಮಾರಾಟವಾಗಿವೆ. ತ್ರಿಚಕ್ರ ವಾಹನಗಳ ಮಾರಾಟವು ಈ ನವೆಂಬರ್‌ನಲ್ಲಿ ಶೇ 31ರಷ್ಟು ಹೆಚ್ಚಾಗಿ 59,738ಕ್ಕೆ ತಲುಪಿದೆ. ಹಿಂದಿನ ಇದೇ ಅವಧಿಯಲ್ಲಿ 45,664 ವಾಹನ ಮಾರಾಟವಾಗಿದ್ದವು ಎಂದು ಒಕ್ಕೂಟ ತಿಳಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.