ADVERTISEMENT

ರಾಜ್ಯದಲ್ಲಿ ಉತ್ಪಾದನಾ ಘಟಕ ಸ್ಥಾಪಿಸಲು ಟೆಸ್ಲಾ ಆಹ್ವಾನಿಸಿದ ಎಂ.ಬಿ ಪಾಟೀಲ

​ಪ್ರಜಾವಾಣಿ ವಾರ್ತೆ
Published 23 ಜೂನ್ 2023, 16:09 IST
Last Updated 23 ಜೂನ್ 2023, 16:09 IST
ಟೆಸ್ಲಾ
ಟೆಸ್ಲಾ   

ಬೆಂಗಳೂರು: ವಿದ್ಯುತ್‌ ಚಾಲಿತ ಕಾರುಗಳ ತಯಾರಿಕಾ ಕಂಪನಿ ಟೆಸ್ಲಾ, ರಾಜ್ಯದಲ್ಲಿ ಉತ್ಪಾದನಾ ಘಟಕ ಸ್ಥಾಪಿಸಲು ನಿರ್ಧರಿಸಿದರೆ, ಎಲ್ಲ ಸಹಕಾರ ನೀಡಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಹೇಳಿದ್ದಾರೆ. ಕಂಪನಿಯು ಕರ್ನಾಟಕದಲ್ಲಿ ಘಟಕ ಸ್ಥಾಪಿಸುವ ಬಗ್ಗೆ ಪರಿಗಣಿಸಬೇಕು ಎಂದು ಅವರು ಕೋರಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಪ್ರವಾಸದ ಸಂದರ್ಭದಲ್ಲಿ ಟೆಸ್ಲಾ ಕಂಪನಿಯ ಮುಖ್ಯಸ್ಥ ಎಲಾನ್ ಮಸ್ಕ್ ಅವರನ್ನು ಭೇಟಿ ಮಾಡಿದ್ದರು. ಮಸ್ಕ್ ಅವರು ಭಾರತದಲ್ಲಿ ಗಮನಾರ್ಹ ಪ್ರಮಾಣದಲ್ಲಿ ಹೂಡಿಕೆ ಮಾಡುವುದಾಗಿ ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಪಾಟೀಲ ಅವರು, ‘ಹೂಡಿಕೆಗೆ ಕರ್ನಾಟಕಕ್ಕೇ ಬನ್ನಿ’ ಎಂದು ಆಹ್ವಾನಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT