ನವದೆಹಲಿ: ಒನ್97 ಕಮ್ಯುನಿಕೇಷನ್ ಒಡೆತನದ ರಿಯಲ್ ಮನಿ ಗೇಮಿಂಗ್ ವೇದಿಕೆಯಾದ ಫಸ್ಟ್ ಗೇಮ್ಸ್‌ಗೆ ₹5,712 ಕೋಟಿ ಜಿಎಸ್‌ಟಿ ಬಾಕಿ ಪಾವತಿಸುವಂತೆ ನೀಡಿದ್ದ ಷೋಕಾಸ್ ನೋಟಿಸ್‌ಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ.
ದೆಹಲಿಯ ಕೇಂದ್ರ ಜಿಎಸ್‌ಟಿ ಗುಪ್ತಚರ ಮಹಾ ನಿರ್ದೇಶನಾಲಯವು (ಡಿಜಿಜಿಐ) ಏಪ್ರಿಲ್‌ನಲ್ಲಿ ನೋಟಿಸ್ ಜಾರಿಗೊಳಿಸಿತ್ತು.
ಈ ನೋಟಿಸ್ ವಿರುದ್ಧ ಫಸ್ಟ್ ಗೇಮ್ಸ್ ಕಂಪನಿಯು ನ್ಯಾಯಾಲಯದ ಮೊರೆ ಹೋಗಿತ್ತು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯವು ತಡೆಯಾಜ್ಞೆ ನೀಡಿದೆ ಎಂದು ಪೇಟಿಎಂನ ಮಾತೃಸಂಸ್ಥೆಯಾದ ಒನ್97 ಕಮ್ಯುನಿಕೇಷನ್, ಶನಿವಾರ ಷೇರುಪೇಟೆಗೆ ಮಾಹಿತಿ ನೀಡಿದೆ.
ತೆರಿಗೆ ವಿಚಾರವು ಇಡೀ ಗೇಮಿಂಗ್ ವಲಯಕ್ಕೆ ಸಂಬಂಧಿಸಿದ್ದಾಗಿದೆ. ಫಸ್ಟ್ ಗೇಮ್ಸ್‌ಗಷ್ಟೇ ಸಂಬಂಧಿಸಿದ್ದಲ್ಲ. ಈ ವಿಷಯವನ್ನು ಸುಪ್ರೀಂ ಕೋರ್ಟ್ ತೀರ್ಮಾನಿಸಲಿದೆ ಎಂದು ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.