ADVERTISEMENT

₹ 100ರ ಗಡಿ ದಾಟಿದ ಡೀಸೆಲ್ ಬೆಲೆ

ಪಿಟಿಐ
Published 1 ಅಕ್ಟೋಬರ್ 2021, 10:53 IST
Last Updated 1 ಅಕ್ಟೋಬರ್ 2021, 10:53 IST
   

ನವದೆಹಲಿ: ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಕಂಪನಿಗಳು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಶುಕ್ರವಾರ ಹೆಚ್ಚಿಸಿದ್ದು, ಈ ಎರಡು ತೈಲೋತ್ಪನ್ನಗಳ ಬೆಲೆಯು ಸಾರ್ವಕಾಲಿಕ ಗರಿಷ್ಠ ಮಟ್ಟ ತಲುಪಿವೆ. ಪೆಟ್ರೋಲ್ ಬೆಲೆಯನ್ನು ಲೀಟರ್‌ಗೆ 25 ಪೈಸೆ, ಡೀಸೆಲ್ ಬೆಲೆಯನ್ನು 30 ಪೈಸೆ ಹೆಚ್ಚು ಮಾಡಲಾಗಿದೆ.

ಇದರಿಂದಾಗಿ ಪೆಟ್ರೋಲ್ ಬೆಲೆ ದೆಹಲಿಯಲ್ಲಿ ₹ 101.89ಕ್ಕೆ, ಮುಂಬೈನಲ್ಲಿ 107.95ಕ್ಕೆ ತಲುಪಿದೆ. ಶುಕ್ರವಾರ ಆದ ಬೆಲೆ ಹೆಚ್ಚಳದ ಪರಿಣಾಮವಾಗಿ ಮಧ್ಯಪ್ರದೇಶ, ರಾಜಸ್ಥಾನ, ಒಡಿಶಾ, ಆಂಧ್ರಪ್ರದೇಶ ಮತ್ತು ತೆಲಂಗಾಣದ ಹಲವು ನಗರಗಳಲ್ಲಿ ಡೀಸೆಲ್ ಬೆಲೆಯು ಲೀಟರ್‌ಗೆ ₹ 100ರ ಗಡಿ ದಾಟಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT