ADVERTISEMENT

ರಾಜಸ್ಥಾನ, ಮಧ್ಯಪ್ರದೇಶದ ಕೆಲವೆಡೆ ₹ 100ರ ಗಡಿ ದಾಟಿದ ಪೆಟ್ರೋಲ್ ಬೆಲೆ

ಪಿಟಿಐ
Published 7 ಮೇ 2021, 6:11 IST
Last Updated 7 ಮೇ 2021, 6:11 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ನವದೆಹಲಿ: ಐದು ವಿಧಾನಸಭಾ ಚುನಾವಣೆಗಳಸಂದರ್ಭದಲ್ಲಿ ಬೆಲೆ ಪರಿಷ್ಕರಣೆಗೆ ವಿರಾಮ ಹಾಕಿದ್ದ ತೈಲ ಕಂಪನಿಗಳು ಇದೀಗ ಸತತ ನಾಲ್ಕನೇ ದಿನ ತೈಲ ಬೆಲೆಗಳನ್ನು ಏರಿಸಿದ್ದು, ಶುಕ್ರವಾರ ರಾಜಸ್ಥಾನ ಮತ್ತು ಮಧ್ಯಪ್ರದೇಶದ ಕೆಲವು ಭಾಗಗಳಲ್ಲಿ ಪೆಟ್ರೋಲ್ ಬೆಲೆ ₹ 100ರ ಗಡಿ ದಾಟಿದೆ.

ಸರ್ಕಾರಿ ಸ್ವಾಮ್ಯದ ಇಂಧನ ಚಿಲ್ಲರೆ ವ್ಯಾಪಾರಿಗಳ ಬೆಲೆ ಅಧಿಸೂಚನೆಯ ಪ್ರಕಾರ ಇಂದು ಪೆಟ್ರೋಲ್ ಬೆಲೆ ಲೀಟರ್‌ಗೆ 29 ಪೈಸೆ ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 31 ಪೈಸೆ ಹೆಚ್ಚಳವಾಗಿದೆ.

ಈ ಮೂಲಕ ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ ₹ 91.27 ಮತ್ತು ಡೀಸೆಲ್ ಬೆಲೆ ₹ 81.73 ಆಗಿದೆ.

ADVERTISEMENT

ರಾಜಸ್ಥಾನದ ಶ್ರೀ ಗಂಗಾನಗರ ಜಿಲ್ಲೆಯಲ್ಲಿ ಪೆಟ್ರೋಲ್ ಲೀಟರ್‌ಗೆ ₹ 102.15 ಮುಟ್ಟಿದೆ ಎಂದು ತೈಲ ಕಂಪನಿಗಳ ಬೆಲೆ ಅಧಿಸುಚನೆಯಲ್ಲಿ ತಿಳಿಸಲಾಗಿದೆ.

ಮಧ್ಯಪ್ರದೇಶದ ಅನುಪ್ಪೂರ್‌ನಲ್ಲಿ, ಈಗ ಪೆಟ್ರೋಲ್ ಬೆಲೆ ₹ 101.86, ಮಹಾರಾಷ್ಟ್ರದ ಪರಭಾನಿಯಲ್ಲಿ ಲೀಟರ್ ಪೆಟ್ರೋಲ್ ಬೆಲೆ 99.95 ರಷ್ಟಾಗಿದೆ.

ಈ ವರ್ಷ ಎರಡನೇ ಬಾರಿಗೆ ದೇಶದ ಕೆಲ ಭಾಗಗಳಲ್ಲಿನ ಪೆಟ್ರೋಲ್ ದರ ₹ 100 ದಾಟಿದೆ. ಫೆಬ್ರವರಿ ಮಧ್ಯಭಾಗದಲ್ಲಿ ಮೊದಲ ಬಾರಿಗೆ ನೂರರ ಗಟಿ ದಾಟಿತ್ತು.

ಸ್ಥಳೀಯ ತೆರಿಗೆಗಳಾದ ವ್ಯಾಟ್ ಮತ್ತು ಸರಕು ಶುಲ್ಕದ ಆಧಾರದ ಮೇಲೆ ಇಂಧನ ಬೆಲೆಗಳು ರಾಜ್ಯದಿಂದ ರಾಜ್ಯಕ್ಕೆ ಭಿನ್ನವಾಗಿರುತ್ತದೆ. ರಾಜಸ್ಥಾನ ರಾಜ್ಯವು ದೇಶದಲ್ಲೇ ಅತಿ ಹೆಚ್ಚು ಮೌಲ್ಯವರ್ಧಿತ ತೆರಿಗೆ(ವ್ಯಾಟ್)ಯನ್ನು ವಿಧಿಸುತ್ತದೆ, ನಂತರದ ಸ್ಥಾನದಲ್ಲಿ ಮಧ್ಯಪ್ರದೇಶವಿದೆ. ಹೀಗಾಗಿ, ಈ ರಾಜ್ಯಗಳಲ್ಲಿ ಪೆಟ್ರೋಲ್ ಬೆಲೆ ನೂರರ ಗಡಿ ದಾಟಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.