ADVERTISEMENT

ಆಂಧ್ರದಲ್ಲಿ ಪೆಟ್ರೋಲ್, ಡೀಸೆಲ್ ದುಬಾರಿ; ಅಂಡಮಾನ್‌ನಲ್ಲಿ ಅಗ್ಗ

ಪಿಟಿಐ
Published 15 ಡಿಸೆಂಬರ್ 2025, 15:37 IST
Last Updated 15 ಡಿಸೆಂಬರ್ 2025, 15:37 IST
ಪೆಟ್ರೋಲ್
ಪೆಟ್ರೋಲ್   

ನವದೆಹಲಿ: ದೇಶದಲ್ಲಿ ಪೆಟ್ರೋಲ್‌ ಮತ್ತು ಡೀಸೆಲ್‌ ಬೆಲೆಯು ಆಂಧ್ರಪ್ರದೇಶದಲ್ಲಿ ಅತಿ ಹೆಚ್ಚು. ಕೇಂದ್ರಾಡಳಿತ ಪ್ರದೇಶವಾದ ಅಂಡಮಾನ್ ಮತ್ತು ನಿಕೋಬಾರ್‌ನಲ್ಲಿ ಅತಿ ಕಡಿಮೆ. ಕೇಂದ್ರ ಸರ್ಕಾರ ಸೋಮವಾರ ರಾಜ್ಯಸಭೆಗೆ ನೀಡಿರುವ ಉತ್ತರವೊಂದರಲ್ಲಿ ಈ ಮಾಹಿತಿ ಇದೆ.

ಆಂಧ್ರಪ್ರದೇಶವು ಪೆಟ್ರೋಲ್‌ ಮತ್ತು ಡೀಸೆಲ್‌ ಮೇಲೆ ಅತಿಹೆಚ್ಚು ಪ್ರಮಾಣದಲ್ಲಿ ಮೌಲ್ಯವರ್ಧಿತ ತೆರಿಗೆ (ವ್ಯಾಟ್‌) ವಿಧಿಸುತ್ತದೆ. ಇದು ಅಲ್ಲಿನ ದುಬಾರಿ ಬೆಲೆಗೆ ಕಾರಣ ಎಂದು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಖಾತೆ ರಾಜ್ಯ ಸಚಿವ ಸುರೇಶ್ ಗೋಪಿ ಹೇಳಿದ್ದಾರೆ.

ಆಂಧ್ರಪ್ರದೇಶದ ರಾಜಧಾನಿ ಅಮರಾವತಿಯಲ್ಲಿ ಲೀಟರ್ ಪೆಟ್ರೋಲ್‌ ಬೆಲೆ ₹109.74, ಅಂಡಮಾನ್ ಮತ್ತು ನಿಕೋಬಾರ್‌ನಲ್ಲಿ ಅದು ₹82.46 ಎಂದು ತಿಳಿಸಿದ್ದಾರೆ.

ADVERTISEMENT

ಪೆಟ್ರೋಲ್‌ ಮತ್ತು ಡೀಸೆಲ್‌ನ ಅಂತಿಮ ಮಾರಾಟ ಬೆಲೆಯು ಕೇಂದ್ರ ಸರ್ಕಾರ ನಿಗದಿಪಡಿಸಿದ ಎಕ್ಸೈಸ್‌ ಸುಂಕ ಹಾಗೂ ರಾಜ್ಯ ಸರ್ಕಾರ ಅಥವಾ ಕೇಂದ್ರಾಡಳಿತ ಪ್ರದೇಶದ ಸರ್ಕಾರ ನಿಗದಿಮಾಡಿದ ವ್ಯಾಟ್‌ ಪ್ರಮಾಣವನ್ನು ಒಳಗೊಂಡಿರುತ್ತದೆ. ಹೀಗಾಗಿ, ಸರಕು ಸಾಗಣೆ ಮತ್ತು ಸ್ಥಳೀಯ ತೆರಿಗೆಯಿಂದಾಗಿ ರಾಜ್ಯದಿಂದ ರಾಜ್ಯಕ್ಕೆ ಪೆಟ್ರೋಲ್‌ ಮತ್ತು ಡೀಸೆಲ್‌ ದರದಲ್ಲಿ ವ್ಯತ್ಯಾಸವಿರುತ್ತದೆ ಎಂದು ಹೇಳಿದ್ದಾರೆ.

ಆಂಧ್ರಪ್ರದೇಶದಲ್ಲಿ ಪ್ರತಿ ಲೀಟರ್‌ ಪೆಟ್ರೋಲ್‌ ಮೇಲೆ ₹29.06 ವ್ಯಾಟ್‌ ವಿಧಿಸಲಾಗುತ್ತದೆ. ಇದು ದೇಶದಲ್ಲಿ ಅತ್ಯಧಿಕ. ಅಂಡಮಾನ್ ಮತ್ತು ನಿಕೋಬಾರ್‌ನಲ್ಲಿ ಪೆಟ್ರೋಲ್‌ ಮೇಲಿನ ವ್ಯಾಟ್ ಕೇವಲ ₹0.82 ಮಾತ್ರ ಇದೆ. ಪ್ರತಿ ಲೀಟರ್‌ ಡೀಸೆಲ್‌ ಬೆಲೆಯು ಆಂಧ್ರಪ್ರದೇಶದಲ್ಲಿ ₹97.57, ವ್ಯಾಟ್‌ ₹21.56 ಇದೆ. ಅಂಡಮಾನ್‌ ಮತ್ತು ನಿಕೋಬಾರ್‌ನಲ್ಲಿ ಡೀಸೆಲ್ ಬೆಲೆ ₹78.05, ವ್ಯಾಟ್‌ ₹0.77ರಷ್ಟು ಇದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.