ADVERTISEMENT

ಪೆಟ್ರೋಲ್, ಡೀಸೆಲ್ ಮೇಲೆ ₹2 ಅಬಕಾರಿ ಸುಂಕ ಹೆಚ್ಚಿಸಿದ ಕೇಂದ್ರ ಸರ್ಕಾರ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 7 ಏಪ್ರಿಲ್ 2025, 10:30 IST
Last Updated 7 ಏಪ್ರಿಲ್ 2025, 10:30 IST
<div class="paragraphs"><p>ಪೆಟ್ರೋಲ್ ಮತ್ತು ಡೀಸೆಲ್  </p></div>

ಪೆಟ್ರೋಲ್ ಮತ್ತು ಡೀಸೆಲ್

   

ಬೆಂಗಳೂರು: ಲೀಟರ್ ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಕೇಂದ್ರ ಸರ್ಕಾರ ಸೋಮವಾರ ₹ 2 ಹೆಚ್ಚಿಸಿದೆ.

ಏಪ್ರಿಲ್ 8ರಿಂದ ಇದು ಅನ್ವಯವಾಗಲಿದೆ.

ADVERTISEMENT

ಅಂತರರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಏರಿಳಿತ ಹಾಗೂ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪ್ರತಿ ಸುಂಕ ಹೇರಿಕೆ ಬೆನ್ನಲ್ಲೇ ಈ ಘೋಷಣೆ ಹೊರಬಿದ್ದಿದ್ದು, ಕೇಂದ್ರ ಸರ್ಕಾರದ ಆದಾಯ ಹೆಚ್ಚಾಗಲಿದೆ.

ಈ ಬಗ್ಗೆ ಕೇಂದ್ರ ಪೆಟ್ರೋಲಿಯಂ ಹಾಗೂ ನೈಸರ್ಗಿಕ ಅನಿಲ ಸಚಿವಾಲಯ ಆದೇಶ ಹೊರಡಿಸಿದ್ದು, ಈ ಹೊಸ ಸುಂಕ ಹೇರಿಕೆ ಚಿಲ್ಲರೆ ಮಾರಾಟದ ದರದ ಮೇಲೆ ಯಾವುದೇ ಪರಿಣಾಮ ಬೀರದು ಎಂದು ಹೇಳಿದೆ.

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಳೆ ಇಳಿಕೆಯಿಂದಾದ ಅಂತರ ಸರಿದೂಗಿದಲು ಅಬಕಾರಿ ಸುಂಕ ಹೆಚ್ಚಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.