ADVERTISEMENT

ಏರುಗತಿಯಲ್ಲಿ ಪೆಟ್ರೋಲ್, ಡೀಸೆಲ್ ದರ

​ಪ್ರಜಾವಾಣಿ ವಾರ್ತೆ
Published 21 ಸೆಪ್ಟೆಂಬರ್ 2019, 4:11 IST
Last Updated 21 ಸೆಪ್ಟೆಂಬರ್ 2019, 4:11 IST
   

ಬೆಂಗಳೂರು: ಸೌದಿ ಅರೇಬಿಯಾದಲ್ಲಿ ಉಂಟಾಗಿರುವ ಕಚ್ಚಾ ತೈಲ ಬಿಕ್ಕಟ್ಟಿನಿಂದಾಗಿ ಭಾರತದಲ್ಲಿಪೆಟ್ರೋಲ್‌, ಡೀಸೆಲ್ ದರ ಏರುಗತಿಯಲ್ಲಿ ಸಾಗುತ್ತಿದೆ.

ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಕಂಪನಿಗಳು ದಿನದಿಂದ ದಿನಕ್ಕೆ ದರ ಏರಿಕೆ ಪ್ರಮಾಣವನ್ನು ಹೆಚ್ಚಿಸುತ್ತಲೇ ಇವೆ.

ಬೆಂಗಳೂರಿನಲ್ಲಿ ಶುಕ್ರವಾರ ಪ್ರತಿ ಲೀಟರ್‌ ಪೆಟ್ರೋಲ್‌ ದರ 37 ಪೈಸೆ ಹೆಚ್ಚಾಗಿ ₹ 75.56 ಮತ್ತು ಡೀಸೆಲ್‌ ದರ 29 ಪೈಸೆ ಹೆಚ್ಚಗಿ ₹ 68.55ಕ್ಕೆ ಏರಿಕೆಯಾಗಿದೆ.

ADVERTISEMENT

ಸೌದಿ ಅರೇಬಿಯಾದ ತೈಲಾಗಾರಗಳ ಮೇಲೆ ಡ್ರೋನ್‌ ದಾಳಿ ನಡೆದಾಗಿನಿಂದ ಇಲ್ಲಿಯವರೆಗೆ ಅಂದರೆ ಶುಕ್ರವಾರದವರೆಗೆ ಪ್ರತಿ ಲೀಟರ್‌ಪೆಟ್ರೋಲ್‌ ಮತ್ತು ಡೀಸೆಲ್‌ ದರದಲ್ಲಿ ಕ್ರಮವಾಗಿ ₹ 1.52 ಮತ್ತು ಡೀಸೆಲ್‌ ದರದಲ್ಲಿ ₹1.25 ಏರಿಕೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.