ನವದೆಹಲಿ: ಕಳೆದ ಕೆಲವು ದಿನಗಳಿಂದ ಪ್ರತಿ ದಿನ ಏರಿಕೆಯಾಗುತ್ತಲೇ ಇರುವ ಇಂಧರ ದರ ಮಂಗಳವಾರವೂ ಹೆಚ್ಚಳವಾಗಿದೆ.
ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್‌ಗೆ 25 ಪೈಸೆ ಹೆಚ್ಚಾಗಿದ್ದು, ₹90.83 ಆಗಿದೆ. ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 35 ಪೈಸೆ ಏರಿಕೆಯಾಗಿ ₹81.32 ಆಗಿದೆ.
ಓದಿ:ಇದೇ ನೋಡಿ ಅಚ್ಚೇ ದಿನ್: ಮುಂಬೈ ಬೀದಿಗಳಲ್ಲಿ, ಪೆಟ್ರೋಲ್ ಬಂಕ್ಗಳಲ್ಲಿ ಬ್ಯಾನರ್
ಮುಂಬೈನಲ್ಲಿ ಪೆಟ್ರೋಲ್, ಡೀಸೆಲ್ ದರ ಕ್ರಮವಾಗಿ 37 ಹಾಗೂ 38 ಪೈಸೆ ಹೆಚ್ಚಳವಾಗಿದೆ. ಅಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ ಈಗ ₹97.34 ಹಾಗೂ ಡೀಸೆಲ್ ಬೆಲೆ ₹88.44 ಆಗಿದೆ.
ಬೆಂಗಳೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ ₹93.98 ಆಗಿದೆ. ಡೀಸೆಲ್ ಬೆಲೆ ₹86.21 ತಲುಪಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.