ADVERTISEMENT

ಆರು ದಿನಗಳಲ್ಲಿ ಐದು ಬಾರಿ ಪೆಟ್ರೋಲ್, ಡೀಸೆಲ್‌ ದರ ಏರಿಕೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 27 ಮಾರ್ಚ್ 2022, 2:50 IST
Last Updated 27 ಮಾರ್ಚ್ 2022, 2:50 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಕಂಪನಿಗಳು ಭಾನುವಾರ ಪೆಟ್ರೋಲ್‌ ಮತ್ತು ಡೀಸೆಲ್‌ ದರವನ್ನು ಲೀಟರಿಗೆ ತಲಾ 50 ಪೈಸೆಯಷ್ಟು ಹೆಚ್ಚಿಸಿವೆ.

ಇದರಿಂದಾಗಿ, ಕಳೆದ ಆರು ದಿನಗಳಲ್ಲಿ ಐದು ಬಾರಿ ತೈಲ ದರದಲ್ಲಿ ಏರಿಕೆ ಕಂಡುಬಂದಿದೆ. ಪ್ರತಿ ಲೀಟರಿಗೆ ₹ 3.70ರಷ್ಟು ಹೆಚ್ಚಿಸಿದಂತಾಗಿದೆ.

ದರ ಹೆಚ್ಚಳದಿಂದಾಗಿ ದೆಹಲಿಯಲ್ಲಿ ಪೆಟ್ರೋಲ್‌ ಬೆಲೆಯು ಲೀಟರಿಗೆ ₹ 99.11 ಹಾಗೂ ಡೀಸೆಲ್‌ ಬೆಲೆಯು ₹ 90.42ಕ್ಕೆ ಏರಿಕೆಯಾಗಿದೆ.

ADVERTISEMENT

ಬೆಂಗಳೂರಿನಲ್ಲಿ ಪ್ರತಿ ಲೀಟರ್‌ ಪೆಟ್ರೋಲ್‌ ಬೆಲೆಯು ₹ 104.41 ಹಾಗೂ ಡೀಸೆಲ್‌ ಬೆಲೆಯು ₹ 88.12ಕ್ಕೆ ತಲುಪಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.