ADVERTISEMENT

ಪೆಟ್ರೋಲ್, ಡೀಸೆಲ್‌ ದರ 2 ವಾರದಲ್ಲಿ 12ನೇ ಬಾರಿ ಏರಿಕೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 4 ಏಪ್ರಿಲ್ 2022, 1:31 IST
Last Updated 4 ಏಪ್ರಿಲ್ 2022, 1:31 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ದೇಶದಾದ್ಯಂತ ಪೆಟ್ರೋಲ್‌ ಮತ್ತು ಡೀಸೆಲ್‌ ದರ ಏರಿಕೆ ಮುಂದುವರಿದಿದೆ. ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಕಂಪನಿಗಳು ಸೋಮವಾರ ಎರಡೂ ಇಂಧನಗಳ ದರವನ್ನು ಪ್ರತಿ ಲೀಟರ್‌ಗೆ ತಲಾ 40 ಪೈಸೆ ಹೆಚ್ಚಿಸಿವೆ.

ಕಳೆದ ಎರಡು ವಾರಗಳಲ್ಲಿ ಪ್ರತಿ ಲೀಟರ್‌ ಪೆಟ್ರೋಲ್‌ ಮತ್ತು ಡೀಸೆಲ್‌ ದರ ತಲಾ ₹8.40 ಏರಿಕೆಯಾಗಿದೆ. ಐದು ರಾಜ್ಯಗಳ ವಿಧಾನಸಭೆ ಚುನಾವಣೆಯ ಕಾರಣಗಳಿಂದಾಗಿ ಸುಮಾರು ನಾಲ್ಕೂವರೆ ತಿಂಗಳು ತೈಲ ದರ ಪರಿಷ್ಕರಣೆಯಾಗಿರಲಿಲ್ಲ. ಮಾರ್ಚ್‌ 22ರಿಂದ ಈವರೆಗೂ 12 ಬಾರಿ ಪೆಟ್ರೋಲ್‌ ಮತ್ತು ಡೀಸೆಲ್‌ ದರ ಹೆಚ್ಚಿಸಲಾಗಿದೆ.

ದೆಹಲಿಯಲ್ಲಿ ಲೀಟರ್‌ ಪೆಟ್ರೋಲ್‌ಗೆ ₹103.81, ಡೀಸೆಲ್‌ಗೆ ₹95.07 ಆಗಿದೆ. ಬೆಂಗಳೂರಿನಲ್ಲಿ ಪ್ರತಿ ಲೀಟರ್‌ ಪೆಟ್ರೋಲ್‌ ದರ ₹109.41 ಮತ್ತು ಡೀಸೆಲ್‌ ದರ ₹93.23 ತಲುಪಿದೆ. ಸ್ಥಳೀಯ ಮಾರಾಟ ತೆರಿಗೆ ಮತ್ತು ಸಾಗಣೆ ವೆಚ್ಚಕ್ಕೆ ಅನುಗುಣವಾಗಿ ಮಾರಾಟ ದರವು ರಾಜ್ಯದಿಂದ ರಾಜ್ಯಕ್ಕೆ ವ್ಯತ್ಯಾಸ ಆಗುತ್ತದೆ.

ADVERTISEMENT

ಮುಂಬೈನಲ್ಲಿ ಲೀಟರ್‌ ಪೆಟ್ರೋಲ್‌ ₹118.83 ಮತ್ತು ಡೀಸೆಲ್‌ ₹103.07; ಚೆನ್ನೈನಲ್ಲಿ ಪೆಟ್ರೋಲ್‌ ₹109.34, ಡೀಸೆಲ್‌ ದರ ₹99.42 ಆಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.