ADVERTISEMENT

ವ್ಯಾಟ್‌ ಏರಿಕೆ: ರಾಜಸ್ಥಾನದಲ್ಲಿ ಪೆಟ್ರೋಲ್‌ ವಿತರಕರ ಒಕ್ಕೂಟದ ಮುಷ್ಕರ

ಪಿಟಿಐ
Published 10 ಏಪ್ರಿಲ್ 2021, 13:22 IST
Last Updated 10 ಏಪ್ರಿಲ್ 2021, 13:22 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಜೈಪುರ: ರಾಜ್ಯದಲ್ಲಿ ಇಂಧನದ ಮೇಲಿನ ಮೌಲ್ಯವರ್ಧಿತ ತೆರಿಗೆ (ವ್ಯಾಟ್‌) ದರ ಹೆಚ್ಚಳವನ್ನು ಹಿಂದಕ್ಕೆ ಪಡೆಯುವಂತೆ ಒತ್ತಾಯಿಸಿ ರಾಜಸ್ಥಾನ ಪೆಟ್ರೋಲಿಯಂ ವಿತರಕರ ಒಕ್ಕೂಟವು ಶನಿವಾರ ಮುಷ್ಕರ ನಡೆಸಿದರು.

ಮುಷ್ಕರದಿಂದಾಗಿ ರಾಜ್ಯದಲ್ಲಿ ಸುಮಾರು 7 ಸಾವಿರಕ್ಕೂ ಅಧಿಕ ಪೆಟ್ರೋಲ್‌ ಬಂಕ್‌ಗಳು ಮುಚ್ಚಿದ್ದವು. ಇದರಿಂದ ಜನರು ತೊಂದರೆ ಎದುರಿಸುವಂತಾಯಿತು. ಸರ್ಕಾರಿ ಸ್ವಾಮ್ಯದ ಕಂಪನಿಗಳ ಒಡೆತನದ ಮತ್ತು ಕಂಪನಿಗಳು ನಡೆಸುವ ಪೆಟ್ರೋಲ್‌ ಬಂಕ್‌ಗಳು ಮಾತ್ರವೇ ತೆರೆದಿದ್ದವು.

ಕೋವಿಡ್‌ ಸಾಂಕ್ರಾಮಿಕದ ಸಂದರ್ಭದಲ್ಲಿ ರಾಜ್ಯ ಸರ್ಕಾರವು ವ್ಯಾಟ್ ಹೆಚ್ಚಿಸಿದ್ದು ಹೆಚ್ಚುವರಿ ವರಮಾನ ಸಂಗ್ರಹಿಸಿದೆ. ನೆರೆಯ ರಾಜ್ಯಗಳಿಗೆ ಹೋಲಿಸಿದರೆ ರಾಜ್ಯದಲ್ಲಿ ಇಂಧನ ದರಗಳು ಕಡಿಮೆ ಇರುವುದರಿಂದ ಮಾರಾಟದ ಪ್ರಮಾಣವು ಶೇ 34ರಷ್ಟು ಇಳಿಕೆ ಆಗಿದೆ ಎಂದು ಒಕ್ಕೂಟದ ಅಧ್ಯಕ್ಷ ಸುನೀತ್ ಬಗಾಯ್‌ ತಿಳಿಸಿದ್ದಾರೆ.

ADVERTISEMENT

ಸರ್ಕಾರಕ್ಕೆ ಈಗಾಗಲೇ ನಮ್ಮ ಬೇಡಿಕೆ ಸಲ್ಲಿಸಿದ್ದೇವೆ. ಸರ್ಕಾರದಿಂದ ಸಕಾರಾತ್ಮಕ ನಿರ್ಧಾರ ಹೊರಬೀಳದೇ ಇದ್ದರೆ ಏಪ್ರಿಲ್‌ 25ರಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಾಗುವುದು ಎಂದೂ ಅವರು ಎಚ್ಚರಿಕೆ ನೀಡಿದ್ದಾರೆ.petrol

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.