ADVERTISEMENT

ಪಿಯೆಜಿಯೊ ಹೊಸ ಷೋರೂಂ ಆರಂಭ

​ಪ್ರಜಾವಾಣಿ ವಾರ್ತೆ
Published 13 ಅಕ್ಟೋಬರ್ 2021, 13:10 IST
Last Updated 13 ಅಕ್ಟೋಬರ್ 2021, 13:10 IST

ಬೆಂಗಳೂರು:ಪಿಯೆಜಿಯೊ ವೆಹಿಕಲ್ಸ್‌ ಪ್ರೈವೇಟ್ ಲಿಮಿಟೆಡ್‌ನ ವಿದ್ಯುತ್ ಚಾಲಿತ ತ್ರಿಚಕ್ರ ವಾಹನಗಳ ಹೊಸ ಷೋರೂಂ ನಗರದಬಿ. ಚನ್ನಸಂದ್ರದಲ್ಲಿ ಆರಂಭವಾಗಿದೆ. ಮೊಬಿಲಿಟಿ ಮೋಟರ್ಸ್‌ನ ಸಹಭಾಗಿತ್ವದಲ್ಲಿ ಈ ಷೋರೂಂ ಆರಂಭವಾಗಿದೆ ಎಂದು ಪ್ರಕಟಣೆ ತಿಳಿಸಿದೆ.

‘ಕಂಪನಿಯ ಷೋರೂಂ ಉದ್ಘಾಟಿಸುತ್ತಿರುವುದು ಸಂತಸ ತಂದಿದೆ. ರಾಜ್ಯ ಸರ್ಕಾರವು ವಿದ್ಯುತ್ ಚಾಲಿತ ವಾಹನಗಳನ್ನು ಹೆಚ್ಚು ಜನಪ್ರಿಯಗೊಳಿಸಲು ಹಲವು ಯೋಜನೆಗಳನ್ನು ರೂಪಿಸಿದೆ’ ಎಂದು ಬುಧವಾರ ನಡೆದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ಸಾರಿಗೆ ಸಚಿವ ಬಿ. ಶ್ರೀರಾಮುಲು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT