ನವದೆಹಲಿ: ಪಿಎಂ ಇಂಟರ್ನ್‌ಶಿಪ್ ಯೋಜನೆಯಡಿ 6.21 ಲಕ್ಷ ಅರ್ಜಿಗಳು ಸಲ್ಲಿಕೆಯಾಗಿವೆ. ಅರ್ಹ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಮುಂದುವರಿದಿದೆ ಎಂದು ಕೇಂದ್ರ ಸರ್ಕಾರ ಭಾನುವಾರ ತಿಳಿಸಿದೆ.
2024–25ನೇ ಸಾಲಿನ ಬಜೆಟ್‌ನಲ್ಲಿ ಸರ್ಕಾರವು ಈ ಯೋಜನೆ ಘೋಷಿಸಿತ್ತು. ಇದರಡಿ ಪ್ರಸಕ್ತ ಆರ್ಥಿಕ ವರ್ಷದಲ್ಲಿ 1.25 ಲಕ್ಷ ಯುವಜನರಿಗೆ ವಿವಿಧ ವೃತ್ತಿ ತರಬೇತಿ ನೀಡಲು ನಿರ್ಧರಿಸಲಾಗಿದೆ.
ದೇಶದ ಪ್ರಮುಖ 500ಕ್ಕೂ ಹೆಚ್ಚು ಕಂಪನಿಗಳ ಮೂಲಕ ಯುವಜನರಿಗೆ ತರಬೇತಿ ನೀಡುವ ಗುರಿ ಹೊಂದಲಾಗಿದೆ. ಕಂಪನಿಗಳ ನೋಂದಣಿ ಅನ್ವಯ ಸದ್ಯ 1.27 ಲಕ್ಷ ಮಂದಿಗೆ ತರಬೇತಿ ನೀಡಬಹುದಾಗಿದೆ. ಸಲ್ಲಿಕೆಯಾಗಿರುವ ಅರ್ಜಿಗಳ ಪೈಕಿ 4.87 ಲಕ್ಷ ಅಭ್ಯರ್ಥಿಗಳು ಪೋರ್ಟಲ್ ಮೂಲಕ ಕೆವೈಸಿ ಪೂರ್ಣಗೊಳಿಸಿದ್ದಾರೆ ಎಂದು ತಿಳಿಸಿದೆ.
ಆಯ್ಕೆಯಾದವರಿಗೆ 12 ತಿಂಗಳು ತರಬೇತಿ ಜೊತೆಗೆ ಮಾಸಿಕ ₹5 ಸಾವಿರ ಭತ್ಯೆ ನೀಡಲಾಗುತ್ತದೆ. ಅಲ್ಲದೆ, ಸರ್ಕಾರವು ಒಂದು ಬಾರಿಗೆ ₹6 ಸಾವಿರ ಆರ್ಥಿಕ ನೆರವು ನೀಡಲಿದೆ.
ಈ ಯೋಜನೆಯಡಿ ಮುಂದಿನ ಐದು ವರ್ಷದಲ್ಲಿ ಒಂದು ಕೋಟಿ ಯುವಜನರಿಗೆ ವೃತ್ತಿ ತರಬೇತಿ ನೀಡುವುದು ಸರ್ಕಾರದ ಗುರಿಯಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.