
ಪಿಟಿಐ
ನವದೆಹಲಿ: ಪಿಎಂ–ಕಿಸಾನ್ ಯೋಜನೆಯ 21ನೇ ಕಂತನ್ನು ಪ್ರಧಾನಿ ನರೇಂದ್ರ ಮೋದಿ ಅವರು, ನವೆಂಬರ್ 19ರಂದು ಬಿಡುಗಡೆ ಮಾಡಲಿದ್ದಾರೆ.
ಈ ಯೋಜನೆಯಡಿ ಪ್ರತಿ ಫಲಾನುಭವಿಗೆ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ-ಕಿಸಾನ್) ಯೋಜನೆಯಡಿ ವಾರ್ಷಿಕ ₹6 ಸಾವಿರ ನೀಡಲಾಗುತ್ತದೆ. ಪ್ರತಿ ನಾಲ್ಕು ತಿಂಗಳಿಗೆ ಮೂರು ಬಾರಿ ರೈತರಿಗೆ ₹2 ಸಾವಿರವನ್ನು ನೇರವಾಗಿ ಅವರ ಬ್ಯಾಂಕ್ ಖಾತೆಗಳಿಗೆ ಜಮೆ ಮಾಡಲಾಗುತ್ತದೆ.
ಇಲ್ಲಿಯವರೆಗೆ, ದೇಶದ 11 ಕೋಟಿಗೂ ಹೆಚ್ಚು ರೈತ ಕುಟುಂಬಗಳಿಗೆ 20 ಕಂತುಗಳ ಮೂಲಕ ₹3.70 ಲಕ್ಷ ಕೋಟಿಗೂ ಹೆಚ್ಚು ಹಣವನ್ನು ವಿತರಿಸಲಾಗಿದೆ ಎಂದು ಎಂದು ಕೇಂದ್ರ ಕೃಷಿ ಇಲಾಖೆ ಶುಕ್ರವಾರ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.