
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಪ್ರಮುಖ ಅರ್ಥಶಾಸ್ತ್ರಜ್ಞರು ಮತ್ತು ವಿವಿಧ ವಲಯಗಳ ತಜ್ಞರ ಜೊತೆ ನಾಳೆ( ಮಂಗಳವಾರ) ಬಜೆಟ್ ಪೂರ್ವ ಸಮಾಲೋಚನಾ ಸಭೆ ನಡೆಸಲಿದ್ದಾರೆ ಎಂದು ಸರ್ಕಾರದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಸಭೆಯಲ್ಲಿ ಮೋದಿ ಅವರು ತಜ್ಞರು ನೀಡುವ ಅಭಿಪ್ರಾಯಗಳನ್ನು ಆಲಿಸಲಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಫೆಬ್ರುವರಿ 1ರಂದು 2026–27ನೇ ಸಾಲಿನ ಬಜೆಟ್ ಮಂಡಿಸಲಿದ್ದಾರೆ.
ಅರ್ಥಶಾಸ್ತ್ರಜ್ಞರು, ವಿವಿಧ ವಲಯದ ತಜ್ಞರ ಜೊತೆಗೆ ನೀತಿ ಆಯೋಗದ ಉಪಾಧ್ಯಕ್ಷ ಸುಮನ್ ಬೆರಿ, ಸಿಇಒ ಬಿ.ವಿ.ಆರ್.ಸುಬ್ರಮಣ್ಯಂ ಸೇರಿದಂತೆ ನೀತಿ ಆಯೋಗದ ಇತರೆ ಸದಸ್ಯರು ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.