ADVERTISEMENT

₹ 1,000 ಕೋಟಿ ಮೊತ್ತದ ಸ್ಟಾರ್ಟ್‌ಅಪ್‌ ಇಂಡಿಯಾ ಸೀಡ್‌ ಫಂಡ್‌: ಮೋದಿ ಘೋಷಣೆ

ಪಿಟಿಐ
Published 16 ಜನವರಿ 2021, 15:29 IST
Last Updated 16 ಜನವರಿ 2021, 15:29 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ನವೋದ್ಯಮಗಳ ಅನುಕೂಲಕ್ಕಾಗಿ ₹ 1 ಸಾವಿರ ಕೋಟಿ ಮೊತ್ತದ ‘ಸ್ಟಾರ್ಟ್‌ಅಪ್ ಇಂಡಿಯಾ ಸೀಡ್‌ ಫಂಡ್‌’ ಆರಂಭಿಸುವುದಾಗಿಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಘೋಷಿಸಿದ್ದಾರೆ.

ನವೋದ್ಯಮಗಳಿಗೆ ಆರಂಭಿಕ ಬಂಡವಾಳ ಒದಗಿಸಲು ಇದನ್ನು ಜಾರಿಗೊಳಿಸಲಾಗುತ್ತಿದೆ. ಹೊಸ ನವೋದ್ಯಮಗಳನ್ನು ಸ್ಥಾಪಿಸಲು ಮತ್ತು ಅವುಗಳ ಬೆಳವಣಿಗೆಗೆ ಈ ನಿಧಿಯು ನೆರವಾಗಲಿದೆ ಎಂದು ಅವರು ವಿವರಿಸಿದ್ದಾರೆ.

‘ಪ್ರಾರಂಭ: ಸ್ಟಾರ್ಟ್‌ಅಪ್‌ ಇಂಡಿಯಾ ಇಂಟರ್‌ನ್ಯಾಷನಲ್‌ ಸಮಿತ್‌’ ಉದ್ದೇಶಿಸಿ ಮಾತನಾಡಿದ ಅವರು, ನವೋದ್ಯಮಗಳ ಬೆಳವಣಿಗೆಯಿಂದಾಗಿ ಉದ್ಯೋಗ ಸೃಷ್ಟಿ ಮತ್ತು ನಿರ್ದಿಷ್ಟ ಪ್ರದೇಶದ ಜನರ ಜೀವನ ಮಟ್ಟದಲ್ಲಿ ಸುಧಾರಣೆ ಆಗುವ ವಿಶ್ವಾಸವಿದೆ ಎಂದಿದ್ದಾರೆ.

ADVERTISEMENT

ಸ್ಟಾರ್ಟ್‌ಅಪ್‌ ಇಂಡಿಯಾ ಕೇವಲ ದೊಡ್ಡ ನಗರಗಳಿಗಷ್ಟೇ ಸೀಮಿತವಾಗಿಲ್ಲ. ಶೇ 40ರಷ್ಟು ಉದ್ಯಮಿಗಳು ಎರಡು ಮತ್ತು ಮೂರನೇ ಶ್ರೇಣಿಯ ನಗರಗಳಿಗೆ ಸೇರಿದವರಾಗಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.