ADVERTISEMENT

ಪಿಎಂ ಸೂರ್ಯ ಘರ್ ಮುಫ್ತ್ ಬಿಜ್ಲಿ ಯೋಜನೆ: 1.45 ಕೋಟಿ ನೋಂದಣಿ

ಪಿಟಿಐ
Published 3 ಡಿಸೆಂಬರ್ 2024, 13:55 IST
Last Updated 3 ಡಿಸೆಂಬರ್ 2024, 13:55 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ನವದೆಹಲಿ: ‘ಪ್ರಧಾನ ಮಂತ್ರಿ ಸೂರ್ಯ ಘರ್ ಮುಫ್ತ್ ಬಿಜ್ಲಿ’ ಯೋಜನೆ ಅಡಿಯಲ್ಲಿ ಸುಮಾರು 1.45 ಕೋಟಿ ನೋಂದಣಿ ಆಗಿವೆ. ಈ ಪೈಕಿ 6.34 ಲಕ್ಷ ಚಾವಣಿ ಸೌರ ಫಲಕಗಳನ್ನು ಅಳವಡಿಸಲಾಗಿದೆ ಎಂದು ಕೇಂದ್ರ ಸಚಿವ ಶ್ರೀಪಾದ್ ನಾಯಕ್ ರಾಜ್ಯಸಭೆಗೆ ತಿಳಿಸಿದ್ದಾರೆ.

ಯೋಜನೆಯಡಿ ಗುಜರಾತ್‌ನಲ್ಲಿ ಗರಿಷ್ಠ 2.86 ಲಕ್ಷ ಚಾವಣಿಗಳಲ್ಲಿ ಸೌರ ಫಲಕಗಳು ಅಳವಡಿಕೆಯಾಗಿವೆ. ನಂತರದ ಸ್ಥಾನಗಳಲ್ಲಿ ಮಹಾರಾಷ್ಟ್ರ 1.26 ಲಕ್ಷ ಮತ್ತು ಉತ್ತರ ಪ್ರದೇಶದಲ್ಲಿ 53,423 ಇದೆ ಎಂದು ತಿಳಿಸಿದ್ದಾರೆ.

ಪ್ರಧಾನಮಂತ್ರಿ ಸೂರ್ಯ ಘರ್ ಮುಫ್ತ್ ಬಿಜ್ಲಿ ಯೋಜನೆಯು 2026–27ರ ಹಣಕಾಸು ವರ್ಷದ ವೇಳೆಗೆ ದೇಶದ 1 ಕೋಟಿ ಕುಟುಂಬಗಳು ಪ್ರತಿ ತಿಂಗಳು 300 ಯೂನಿಟ್‌ಗಳವರೆಗೆ ಉಚಿತ ವಿದ್ಯುತ್‌ ಅನ್ನು ಪಡೆಯಲು ಸಾಧ್ಯವಾಗುವಂತೆ ಚಾವಣಿ ಸೌರ ಫಲಕಗಳನ್ನು ಅಳವಡಿಸುವ ಗುರಿಯನ್ನು ಹೊಂದಿದೆ. ಇದಕ್ಕಾಗಿ ಕೇಂದ್ರ ₹75,021 ಕೋಟಿ ಮೀಸಲಿಟ್ಟಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.