ADVERTISEMENT

ಪಿಎಂ–ಕಿಸಾನ್‌: ₹22 ಸಾವಿರ ಕೋಟಿ ಬಿಡುಗಡೆ

ಪಿಟಿಐ
Published 21 ಫೆಬ್ರುವರಿ 2025, 14:34 IST
Last Updated 21 ಫೆಬ್ರುವರಿ 2025, 14:34 IST
   

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಪಿಎಂ–ಕಿಸಾನ್‌ ಯೋಜನೆಯಡಿ 19ನೇ ಕಂತಿನ ₹22 ಸಾವಿರ ಕೋಟಿ ಮೊತ್ತವನ್ನು ಬಿಡುಗಡೆ ಮಾಡಿದ್ದಾರೆ. 9.8 ಕೋಟಿ ರೈತರಿಗೆ ಇದರಿಂದ ಅನುಕೂಲವಾಗಲಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ಈ ಯೋಜನೆಯಡಿ ಪ್ರತಿ ಫಲಾನುಭವಿಗೆ ವಾರ್ಷಿಕ ₹6 ಸಾವಿರ ನೀಡಲಾಗುತ್ತದೆ. ಪ್ರತಿ ನಾಲ್ಕು ತಿಂಗಳಿಗೆ ಮೂರು ಬಾರಿ ರೈತರಿಗೆ ₹2 ಸಾವಿರವನ್ನು ನೇರವಾಗಿ ಅವರ ಬ್ಯಾಂಕ್‌ ಖಾತೆಗಳಿಗೆ ಜಮೆ ಮಾಡಲಾಗುತ್ತದೆ.

18ನೇ ಕಂತಿನಲ್ಲಿ 9.6 ಕೋಟಿ ಇದ್ದ ಫಲಾನುಭವಿಗಳ ಸಂಖ್ಯೆಯು ಈ ಬಾರಿ ಹೆಚ್ಚಳವಾಗಿದೆ. ಸದ್ಯ ಬಿಡುಗಡೆಯಾಗಿರುವ ಮೊತ್ತವು ಸೇರಿದರೆ ಇಲ್ಲಿಯವರೆಗೆ ಈ ಯೋಜನೆಯಡಿ ಬಿಡುಗಡೆಯಾಗಿರುವ ಮೊತ್ತ ₹3.68 ಲಕ್ಷ ಕೋಟಿಯಾಗಿದೆ ಎಂದು ತಿಳಿಸಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.