ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ ರೆಪೊ ದರ ಕಡಿತಗೊಳಿಸಿದ ಬೆನ್ನಲ್ಲೇ ಸರ್ಕಾರಿ ಸ್ವಾಮ್ಯದ ಪಂಜಾಬ್ ನ್ಯಾಷನಲ್ ಬ್ಯಾಂಕ್ (ಪಿಎನ್‌ಬಿ) ಶೇ 0.50ರಷ್ಟು ಬಡ್ಡಿ ದರ ಕಡಿತಗೊಳಿಸಿದೆ.
ರೆಪೊ ದರ ಆಧರಿಸಿದ ಗೃಹ ಮತ್ತು ವಾಹನ ಸಾಲದ ಮೇಲಿನ ವಾರ್ಷಿಕ ಬಡ್ಡಿದರವು ಕ್ರಮವಾಗಿ ಶೇ 7.45 ಮತ್ತು ಶೇ 7.8ರಿಂದ ಆರಂಭವಾಗಲಿದೆ. ಪರಿಷ್ಕೃತ ಬಡ್ಡಿ ದರವು ಜೂನ್ 9ರಿಂದ ಅನ್ವಯ ಆಗಲಿದೆ ಎಂದು ಬ್ಯಾಂಕ್ ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ತಿಳಿಸಿದೆ.
ಆರ್‌ಬಿಐ ಶುಕ್ರವಾರ ರೆಪೊ ದರವನ್ನು ಶೇ 0.50ರಷ್ಟು ಇಳಿಕೆ ಮಾಡಿತ್ತು. ಇತರೆ ಬ್ಯಾಂಕ್‌ಗಳು ಸಹ ಶೀಘ್ರ ಬಡ್ಡಿ ದರ ಕಡಿತ ಮಾಡುವ ನಿರೀಕ್ಷೆಯಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.