ನವದೆಹಲಿ: ಸರ್ಕಾರಿ ಸ್ವಾಮ್ಯದ ಪಂಜಾಬ್ ನ್ಯಾಷನಲ್ ಬ್ಯಾಂಕ್ (ಪಿಎನ್‌ಬಿ) ತನ್ನ 131ನೇ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ಗ್ರಾಹಕರಿಗೆ ಅನುಕೂಲ ಕಲ್ಪಿಸಲು 34 ಹೊಸ ಯೋಜನೆಗಳನ್ನು ಪ್ರಕಟಿಸಿದೆ.
ಈ ಪೈಕಿ 12 ಗ್ರಾಹಕ ಕೇಂದ್ರೀತ ಠೇವಣಿ ಯೋಜನೆಗಳಾಗಿವೆ. ಡಿಜಿಟಲ್ ವ್ಯವಸ್ಥೆಯಡಿ ಸಾಲ ಸೌಲಭ್ಯ, ಡಿಮ್ಯಾಟ್ ಖಾತೆ ತೆರೆಯುವುದು ಹಾಗೂ ವಾಟ್ಸ್‌ಆ್ಯಪ್ ಮೂಲಕ ಸ್ಥಿರ ಠೇವಣಿಗೆ ಹೆಸರು ನೋಂದಣಿ ಸೌಲಭ್ಯವನ್ನು ಕಲ್ಪಿಸಲಾಗಿದೆ ಎಂದು ಬ್ಯಾಂಕ್ ತಿಳಿಸಿದೆ.
ವೇತನ ವರ್ಗ, ಮಹಿಳೆಯರು, ರಕ್ಷಣಾ ಸಿಬ್ಬಂದಿ, ರೈತರು, ಎನ್‌ಆರ್‌ಐ, ಹಿರಿಯ ನಾಗರಿಕರು, ಪಿಂಚಣಿದಾರರು, ವಿದ್ಯಾರ್ಥಿಗಳು ಮತ್ತು ಯುವಜನತೆಗೆ ಅನುಕೂಲವಾಗುವಂತೆ ಠೇವಣಿ ಯೋಜನೆಗಳನ್ನು ರೂಪಿಸಲಾಗಿದೆ ಎಂದು ಹೇಳಿದೆ.
ಗ್ರಾಹಕರ ಪ್ರತಿಕ್ರಿಯೆಗಾಗಿ ಕ್ಯೂಆರ್ ಕೋಡ್ ವ್ಯವಸ್ಥೆಯನ್ನು ಪರಿಚಯಿಸಿದೆ. ಕೃತಕ ಬುದ್ಧಿಮತ್ತೆ ತಂತ್ರಜ್ಞಾನ ಬಳಸಿಕೊಂಡು ಗ್ರಾಹಕರಿಗೆ ಬ್ಯಾಂಕಿಂಗ್ ಸೇವೆಗಳ ಬಗ್ಗೆ ಮಾಹಿತಿ ಒದಗಿಸುವ ಕಾರ್ಯಕ್ಕೂ ಚಾಲನೆ ನೀಡಲಾಗಿದೆ ಎಂದು ವಿವರಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.