ನವದೆಹಲಿ: 2024–25ನೇ ಆರ್ಥಿಕ ವರ್ಷದ ಡಿಸೆಂಬರ್ ತ್ರೈಮಾಸಿಕದಲ್ಲಿ ಸರ್ಕಾರಿ ಸ್ವಾಮ್ಯದ ಪಂಜಾಬ್ ನ್ಯಾಷನಲ್ ಬ್ಯಾಂಕ್ (ಪಿಎನ್‌ಬಿ), ₹4,508 ಕೋಟಿ ನಿವ್ವಳ ಲಾಭ ಗಳಿಸಿದೆ.
2023–24ನೇ ಆರ್ಥಿಕ ವರ್ಷದ ಇದೇ ತ್ರೈಮಾಸಿಕದಲ್ಲಿ ₹2,223 ಕೋಟಿ ಲಾಭ ಗಳಿಸಲಾಗಿತ್ತು. ಇದಕ್ಕೆ ಹೋಲಿಸಿದರೆ ದುಪ್ಪಟ್ಟು ಏರಿಕೆ ಆಗಿದೆ ಎಂದು ಬ್ಯಾಂಕ್ ಶುಕ್ರವಾರ ಷೇರುಪೇಟೆಗೆ ತಿಳಿಸಿದೆ.
ಕಳೆದ ಆರ್ಥಿಕ ವರ್ಷದ ಡಿಸೆಂಬರ್ ತ್ರೈಮಾಸಿಕದಲ್ಲಿ ಒಟ್ಟು ₹29,962 ಕೋಟಿ ವರಮಾನ ಸಂಗ್ರಹವಾಗಿತ್ತು. ಈ ಬಾರಿ ₹34,752 ಕೋಟಿ ಸಂಗ್ರಹವಾಗಿದೆ. ಬಡ್ಡಿ ವರಮಾನ ₹31,340 ಕೋಟಿ ಸಂಗ್ರಹವಾಗಿದೆ.
ವಸೂಲಾಗದ ಸಾಲದ ಸರಾಸರಿ ಪ್ರಮಾಣ (ಜಿಎನ್‌ಪಿಎ) ಶೇ 6.24ರಿಂದ ಶೇ 4.09ಕ್ಕೆ ತಗ್ಗಿದೆ. ನಿವ್ವಳ ಎನ್‌ಪಿಎ ಶೇ 0.96ರಿಂದ ಶೇ 0.41ಕ್ಕೆ ಇಳಿದಿದೆ ಎಂದು ಬ್ಯಾಂಕ್ ತಿಳಿಸಿದೆ.
ಕಳೆದ ಡಿಸೆಂಬರ್ ತ್ರೈಮಾಸಿಕದಲ್ಲಿ ವಸೂಲಾಗದ ಸಾಲವು ₹2,994 ಕೋಟಿ ಇತ್ತು. ಈ ಬಾರಿ ₹318 ಕೋಟಿಗೆ ಇಳಿದಿದೆ. ಸಾಲ ವಸೂಲಾತಿ ಪ್ರಮಾಣದಲ್ಲಿ ಹೆಚ್ಚಳವಾಗಿದೆ ಎಂದು ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.