ADVERTISEMENT

ಪಿಎನ್‌ಬಿಗೆ ₹4,567 ಕೋಟಿ ಲಾಭ

​ಪ್ರಜಾವಾಣಿ ವಾರ್ತೆ
Published 7 ಮೇ 2025, 14:34 IST
Last Updated 7 ಮೇ 2025, 14:34 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ನವದೆಹಲಿ: 2024–25ನೇ ಆರ್ಥಿಕ ವರ್ಷದ ಮಾರ್ಚ್ ತ್ರೈಮಾಸಿಕದಲ್ಲಿ ಸರ್ಕಾರಿ ಸ್ವಾಮ್ಯದ ಪಂಜಾಬ್ ನ್ಯಾಷನಲ್ ಬ್ಯಾಂಕ್‌ನ (ಪಿಎನ್‌ಬಿ), ನಿವ್ವಳ ಲಾಭದಲ್ಲಿ ಶೇ 52ರಷ್ಟು ಹೆಚ್ಚಳವಾಗಿದೆ. 

ಮಾರ್ಚ್‌ ತ್ರೈಮಾಸಿಕದಲ್ಲಿ ₹4,567 ಕೋಟಿ ನಿವ್ವಳ ಲಾಭ ಗಳಿಸಿದೆ. 2023–24ನೇ ಆರ್ಥಿಕ ವರ್ಷದ ಇದೇ ಅವಧಿಯಲ್ಲಿ ₹3,010 ಕೋಟಿ ಲಾಭ ಗಳಿಸಲಾಗಿತ್ತು ಎಂದು ಬ್ಯಾಂಕ್, ಷೇರುಪೇಟೆಗೆ ಬುಧವಾರ ತಿಳಿಸಿದೆ.

ಬ್ಯಾಂಕ್‌ನ ಒಟ್ಟು ವರಮಾನ ₹36,705 ಕೋಟಿಯಾಗಿದೆ. ಬಡ್ಡಿ ವರಮಾನವು ₹31,989 ಕೋಟಿ ಆಗಿದೆ. ವಸೂಲಾಗದ ಸಾಲದ ಸರಾಸರಿ ಪ್ರಮಾಣವು (ಜಿಎನ್‌ಪಿಎ) ಶೇ 5.73ರಿಂದ ಶೇ 3.95ಕ್ಕೆ ಇಳಿದಿದೆ. ನಿವ್ವಳ ಎನ್‌ಪಿಎ ಶೇ 0.73ರಿಂದ ಶೇ 0.40ಕ್ಕೆ ತಗ್ಗಿದೆ. 

ADVERTISEMENT

2024–25ನೇ ಪೂರ್ಣ ಆರ್ಥಿಕ ವರ್ಷದಲ್ಲಿ ಬ್ಯಾಂಕ್‌ ₹16,630 ಕೋಟಿ ನಿವ್ವಳ ಲಾಭ ಗಳಿಸಿದೆ. ಪ್ರತಿ ಷೇರಿಗೆ ₹2.90 ಲಾಭಾಂಶ ನೀಡಲು ಬ್ಯಾಂಕ್‌ನ ಆಡಳಿತ ಮಂಡಳಿಯು ಅನುಮೋದನೆ ನೀಡಿದೆ.  

ಪ್ರಸಕ್ತ ಆರ್ಥಿಕ ವರ್ಷದಲ್ಲಿ ಸಾಲ ನೀಡಿಕೆ ಪ್ರಮಾಣದಲ್ಲಿ ಶೇ 11ರಿಂದ ಶೇ 12ರಷ್ಟು ಹೆಚ್ಚಳವಾಗುವ ನಿರೀಕ್ಷೆಯಿದೆ. ಠೇವಣಿ ಮೊತ್ತವು ಶೇ 9ರಿಂದ ಶೇ 10ರಷ್ಟು ಹೆಚ್ಚಳವಾಗಲಿದೆ. ಹೆಚ್ಚುವರಿಯಾಗಿ 200 ಶಾಖೆ ಸ್ಥಾಪಿಸಲು ನಿರ್ಧರಿಸಲಾಗಿದೆ. ಅಲ್ಲದೆ, ಮೂರು ಸಾವಿರ ಉದ್ಯೋಗಿಗಳ ನೇಮಕಕ್ಕೆ ನಿರ್ಧರೊಸಲಾಗಿದೆ’ ಎಂದು ಬ್ಯಾಂಕ್‌ನ ವ್ಯವಸ್ಥಾಪಕ ನಿರ್ದೇಶಕ ಮತ್ತು ಸಿಇಒ ಅಶೋಕ್‌ ಚಂದ್ರ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.