ಪೂನಂ ಗುಪ್ತಾ
ನವದೆಹಲಿ: ರಾಷ್ಟ್ರೀಯ ಅನ್ವಯಿಕ ಆರ್ಥಿಕ ಸಂಶೋಧನಾ ಮಂಡಳಿಯ (ಎನ್‌ಸಿಎಇಆರ್) ಮಹಾನಿರ್ದೇಶಕಿ ಪೂನಂ ಗುಪ್ತಾ ಅವರನ್ನು ಭಾರತೀಯ ರಿಸರ್ವ್ ಬ್ಯಾಂಕ್‌ನ ಡೆಪ್ಯುಟಿ ಗವರ್ನರ್ ಆಗಿ ನೇಮಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಡೆಪ್ಯುಟಿ ಗವರ್ನರ್ ಆಗಿದ್ದ ಎಂ.ಡಿ. ಪಾತ್ರಾ ಅವರ ಅಧಿಕಾರಾವಧಿಯು ಜನವರಿಯಲ್ಲಿ ಮುಕ್ತಾಯಗೊಂಡಿತ್ತು. ಖಾಲಿಯಾಗಿದ್ದ ಈ ಹುದ್ದೆಗೆ ಪೂನಂ ಅವರನ್ನು ಮೂರು ವರ್ಷದ ಅವಧಿಗೆ ನೇಮಿಸಲು ಸಂಪುಟದ ನೇಮಕಾತಿಗಳ ಸಮಿತಿಯು ಒಪ್ಪಿಗೆ ನೀಡಿದೆ ಎಂದು ಹೇಳಿವೆ.
ಎನ್‌ಸಿಎಇಆರ್ ದೇಶದ ಆರ್ಥಿಕ ನೀತಿಗಳಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರಕ್ಕೆ ಸಲಹೆ ನೀಡುವ ಪ್ರಮುಖ ಸಂಸ್ಥೆಯಾಗಿದೆ.
ಪೂನಂ ಅವರು ಸದ್ಯ ಪ್ರಧಾನ ಮಂತ್ರಿ ಅವರ ಆರ್ಥಿಕ ಸಲಹಾ ಸಮತಿಯ ಸದಸ್ಯೆಯಾಗಿದ್ದಾರೆ. ಅಲ್ಲದೆ, 16ನೇ ಹಣಕಾಸು ಆಯೋಗದ ಸಲಹಾ ಮಂಡಳಿಯ ಸಂಚಾಲಕಿ ಕೂಡ ಆಗಿದ್ದಾರೆ.
ದೆಹಲಿ ವಿಶ್ವವಿದ್ಯಾಲಯದಿಂದ ಅರ್ಥಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಹಾಗೂ ಅಮೆರಿಕದ ಮೇರಿಲ್ಯಾಡ್ ವಿ.ವಿಯಿಂದ ಅರ್ಥಶಾಸ್ತ್ರ ವಿಷಯದಲ್ಲಿ ಪಿಎಚ್.ಡಿ ಪಡೆದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.