ಪ್ರಾತಿನಿಧಿಕ ಚಿತ್ರ
ನವದೆಹಲಿ: ಕಳೆದ ವರ್ಷ ವಾಹನ ತಯಾರಿಕಾ ಕಂಪನಿಗಳು 2.54 ಕೋಟಿ ವಾಹನಗಳನ್ನು ಸಗಟು ಮಾರಾಟ ಮಾಡಿವೆ ಎಂದು ಭಾರತೀಯ ವಾಹನ ತಯಾರಕರ ಒಕ್ಕೂಟ (ಎಸ್‌ಐಎಎಂ) ಮಂಗಳವಾರ ತಿಳಿಸಿದೆ.
2023ರಲ್ಲಿ 2.28 ಕೋಟಿ ವಾಹನಗಳನ್ನು ಮಾರಾಟ ಮಾಡಿದ್ದವು. ಇದಕ್ಕೆ ಹೋಲಿಸಿದರೆ ಶೇ 12ರಷ್ಟು ಏರಿಕೆಯಾಗಿದೆ. ಗ್ರಾಹಕರಿಂದ ವಾಹನಗಳಿಗೆ ಹೆಚ್ಚಿದ ಬೇಡಿಕೆಯಿಂದಾಗಿ ಸಗಟು ಮಾರಾಟದಲ್ಲಿ ಏರಿಕೆಯಾಗಿದೆ ಎಂದು ತಿಳಿಸಿದೆ.
1.95 ಕೋಟಿ ದ್ವಿಚಕ್ರ ವಾಹನಗಳು ಮಾರಾಟವಾಗಿದ್ದು, ಶೇ 14.5ರಷ್ಟು ಹೆಚ್ಚಳವಾಗಿದೆ. ಪ್ರಯಾಣಿಕ ವಾಹನಗಳ ಮಾರಾಟವು ಶೇ 4ರಷ್ಟು ಏರಿಕೆಯಾಗಿದ್ದು, 43 ಲಕ್ಷ ಮಾರಾಟವಾಗಿವೆ. 7.3 ಲಕ್ಷ ತ್ರಿಚಕ್ರ ವಾಹನಗಳು ಮಾರಾಟವಾಗಿವೆ ಎಂದು ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.