ADVERTISEMENT

ಆರ್‌ಬಿಐ ವ್ಯಾಪ್ತಿಗೆ ಸಹಕಾರಿ ಬ್ಯಾಂಕ್‌: ಸುಗ್ರೀವಾಜ್ಞೆಗೆ ರಾಷ್ಟ್ರಪತಿ ಅಂಕಿತ

ಪಿಟಿಐ
Published 27 ಜೂನ್ 2020, 14:11 IST
Last Updated 27 ಜೂನ್ 2020, 14:11 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ನವದೆಹಲಿ: ಎಲ್ಲಸಹಕಾರಿಬ್ಯಾಂಕ್‌ಗಳನ್ನೂ ಭಾರತೀಯ ರಿಸರ್ವ್‌ ಬ್ಯಾಂಕ್‌ನ (ಆರ್‌ಬಿಐ) ವ್ಯಾಪ್ತಿಗೆ ತರುವ ಕೇಂದ್ರ ಸರ್ಕಾರದ ಸುಗ್ರೀವಾಜ್ಞೆಗೆ ರಾಷ್ಟ್ರಪತಿ ರಾಮನಾಥ ಕೋವಿಂದ್‌ ಅಂಕಿತ ಹಾಕಿದ್ದಾರೆ.

ವಂಚನೆ ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದಠೇವಣಿದಾರರ ಹಿತರಕ್ಷಣೆ ಮತ್ತು ಸಹಕಾರಿ ಬ್ಯಾಂಕ್‌ಗಳ ಬಲವರ್ಧನೆಗಾಗಿ ಅವುಗಳನ್ನು ಆರ್‌ಬಿಐ ವ್ಯಾಪ್ತಿಗೆ ತರಲುಬ್ಯಾಂಕಿಂಗ್‌ ನಿಯಂತ್ರಣ ಕಾಯ್ದೆ ತಿದ್ದುಪಡಿ ಮಸೂದೆಯನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಲು ಸರ್ಕಾರ ನಿರ್ಧರಿಸಿತ್ತು. ಇದನ್ನು ರಾಷ್ಟ್ರಪತಿ ಅವರ ಒಪ್ಪಿಗೆಗಾಗಿ ಕಳುಹಿಸಿತ್ತು.

ವಾಣಿಜ್ಯ ಬ್ಯಾಂಕ್‌ಗಳಿಗೆ ಅನ್ವಯಿಸುವ ಆರ್‌ಬಿಐನ ಮೇಲ್ವಿಚಾರಣೆ ಪ್ರಕ್ರಿಯೆಯುಇನ್ನು ಮುಂದೆ ಪಟ್ಟಣ ಸಹಕಾರಿ ಬ್ಯಾಂಕ್‌ ಮತ್ತು ಬಹು ರಾಜ್ಯ ವ್ಯಾಪ್ತಿಯ ಸಹಕಾರಿ ಬ್ಯಾಂಕ್‌ಗಳಿಗೂ ಅನ್ವಯವಾಗಲಿದೆ ಎಂದು ಅಧಿಕೃತ ಪ್ರಕಟಣೆಯಲ್ಲಿ ತಿಳಿಸಲಾಗಿದೆ.‌

ADVERTISEMENT

ಈ ತಿದ್ದುಪಡಿಯಿಂದರಿಜಿಸ್ಟ್ರಾರ್‌ ಆಫ್‌ ಕೊ–ಆಪರೇಟೀವ್‌ ಸೊಸೈಟಿಯು ಹೊಂದಿರುವ ಅಧಿಕಾರದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ತಿಳಿಸಲಾಗಿದೆ.

ಪ್ರಾಥಮಿಕ ಕೃಷಿ ಸಹಕಾರ ಸಂಘ ಅಥವಾ ಸಹಕಾರಿ ಸಂಘಗಳಿಗೆ ಈ ತಿದ್ದುಪಡಿ ಅನ್ವಯವಾಗುವುದಿಲ್ಲ. ಅಂತೆಯೇ ಬ್ಯಾಂಕ್, ಬ್ಯಾಂಕರ್‌ ಅಥವಾ ಬ್ಯಾಂಕಿಂಗ್‌ ಪದ ಬಳಸದೇ ಇರುವ ಹಾಗೂ ಚೆಕ್‌ಗಳನ್ನು ನಗದೀಕರಿಸದೇ ಇರುವುದಕ್ಕೂ ಅನ್ವಯಿಸುವುದಿಲ್ಲ.

ಸಹಕಾರಿ ಬ್ಯಾಂಕ್‌ಗಳಲ್ಲಿ ಇತ್ತೀಚೆಗೆ ಹಗರಣಗಳ ಹೆಚ್ಚಾಗುತ್ತಿವೆ.ಬೆಂಗಳೂರಿನ ಶ್ರೀ ಗುರು ರಾಘವೇಂದ್ರ ಸಹಕಾರಿ ಬ್ಯಾಂಕ್‌ ಮತ್ತು ಮಹಾರಾಷ್ಟ್ರದ ಪಂಜಾಬ್‌ ಆ್ಯಂಡ್‌ ಮಹಾರಾಷ್ಟ್ರ ಸಹಕಾರಿ ಬ್ಯಾಂಕ್‌ (ಪಿಎಂಸಿ) ಸೇರಿದಂತೆ ಐದು ಬ್ಯಾಂಕ್‌ಗಳು ಇತ್ತೀಚೆಗೆ ಆರ್‌ಬಿಐನಿಂದ ನಿರ್ಬಂಧಕ್ಕೆ ಒಳಪಟ್ಟಿವೆ.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.