ADVERTISEMENT

ವಾಣಿಜ್ಯ ಬಳಕೆ ಸಿಲಿಂಡರ್ ದರ ₹ 198 ಇಳಿಕೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 1 ಜುಲೈ 2022, 7:45 IST
Last Updated 1 ಜುಲೈ 2022, 7:45 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ನವದೆಹಲಿ:ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ದರವನ್ನು ₹ 198ರಷ್ಟು ಕಡಿಮೆ ಮಾಡಲಾಗಿದೆ. ಹೋಟೆಲ್‌, ರೆಸ್ಟೋರೆಂಟ್‌ಗಳು, ಟೀ ಅಂಗಡಿಗಳಿಗೆ ಇದರಿಂದ ನೆರವಾಗಲಿದೆ.

ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಕಂಪನಿಗಳ ಅಧಿಸೂಚನೆಯ ಪ್ರಕಾರ, ದೆಹಲಿಯಲ್ಲಿ ವಾಣಿಜ್ಯ ಬಳಕೆಯ 19 ಕೆ.ಜಿ. ತೂಕದ ಎಲ್‌ಪಿಜಿ ಸಿಲಿಂಡರ್‌ ದರ ₹2,219 ರಿಂದ ₹ 2,021ಕ್ಕೆ ಇಳಿಕೆ ಆಗಿದೆ. ಸ್ಥಳೀಯ ಮಾರಾಟ ತೆರಿಗೆಗೆ ಅನುಗುಣವಾಗಿ ರಾಜ್ಯದಿಂದ ರಾಜ್ಯಕ್ಕೆ ಬೆಲೆಯಲ್ಲಿ ವ್ಯತ್ಯಾಸ ಆಗುತ್ತದೆ.

ಜೂನ್‌ 1ರಂದೂ ₹ 135 ರಷ್ಟು ದರ ಇಳಿಕೆ ಮಾಡಲಾಗಿತ್ತು.

ADVERTISEMENT

ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ದರದಲ್ಲಿ ಯಾವುದೇ ಬದಲಾವಣೆ ಆಗಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.