ADVERTISEMENT

ದೇಶದಾದ್ಯಂತ ಶುಕ್ರವಾರವೂ ಏರಿಕೆ ಕಂಡ ತೈಲ ದರ- ಬೆಂಗಳೂರಲ್ಲಿ ಎಷ್ಟಿದೆ ಗೊತ್ತೇ?

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 29 ಅಕ್ಟೋಬರ್ 2021, 1:28 IST
Last Updated 29 ಅಕ್ಟೋಬರ್ 2021, 1:28 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ    

ಮುಂಬೈ: ದೇಶದಾದ್ಯಂತ ಪೆಟ್ರೋಲ್‌ ಮತ್ತು ಡೀಸೆಲ್‌ ದರವು ಶುಕ್ರವಾರವೂ ಏರಿಕೆ ಕಂಡಿದೆ ಎಂದು ಸುದ್ದಿಸಂಸ್ಥೆ ಎಎನ್‌ಐ ಟ್ವೀಟ್‌ ಮಾಡಿದೆ.

ದೆಹಲಿಯಲ್ಲಿ ಪೆಟ್ರೋಲ್‌ ಮತ್ತು ಡೀಸೆಲ್‌ ತಲಾ 35 ಪೈಸೆ ಹೆಚ್ಚಳವಾಗಿದ್ದು, ಪ್ರತಿ ಲೀಟರ್‌ಗೆ ಕ್ರಮವಾಗಿ ₹108.64 ಮತ್ತು ₹97.37 ಮುಟ್ಟಿದೆ.

ಮುಂಬೈನಲ್ಲಿ ಪೆಟ್ರೋಲ್‌ ₹112.44 ಮತ್ತು ಡೀಸೆಲ್‌ ₹103.26ಕ್ಕೆ ಏರಿಕೆಯಾಗಿದೆ.

ADVERTISEMENT

ಕೋಲ್ಕತ್ತದಲ್ಲಿ ಪೆಟ್ರೋಲ್‌ ₹107.12, ಡೀಸೆಲ್‌ ₹98ಕ್ಕೆ ತಲುಪಿದೆ.

ಚೆನ್ನೈನಲ್ಲಿ ಪೆಟ್ರೋಲ್‌ ₹103.26 ಮತ್ತು ಡೀಸೆಲ್‌ ₹99.68ಕ್ಕೆ ಮಾರಾಟವಾಗುತ್ತಿದೆ.

ಬೆಂಗಳೂರಿನಲ್ಲಿ ಪೆಟ್ರೋಲ್‌ ₹ 112.39 ಮತ್ತು ಡೀಸೆಲ್‌ ಬೆಲೆ ₹ 103.31 ರಷ್ಟಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.