ADVERTISEMENT

ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ದರ ₹135 ಇಳಿಕೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 1 ಜೂನ್ 2022, 3:12 IST
Last Updated 1 ಜೂನ್ 2022, 3:12 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ದರವನ್ನು ಬುಧವಾರ ₹135ರಷ್ಟು ಇಳಿಕೆ ಮಾಡಲಾಗಿದೆ. ಇದರಿಂದಾಗಿ ಬೆಂಗಳೂರಿನಲ್ಲಿ 19 ಕೆ.ಜಿ. ತೂಕದ ಪ್ರತಿ ಸಿಲಿಂಡರ್ ಬೆಲೆಯು ₹ 2,300ಕ್ಕೆ ಇಳಿಕೆಯಾಗಿದೆ.

ದೆಹಲಿಯಲ್ಲಿ ₹2,219, ಕೋಲ್ಕತ್ತ ₹2,322, ಮುಂಬೈನಲ್ಲಿ ₹2,171.50, ಚೆನ್ನೈನಲ್ಲಿ ₹2,373 ರಷ್ಟಿದೆ.

ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ ದರದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಸದ್ಯ 14.2 ಕೆ.ಜಿ. ತೂಕದ ಸಿಲಿಂಡರ್‌ ದರವು ಬೆಂಗಳೂರಿನಲ್ಲಿ ₹ 1,006 ರಷ್ಟಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.