ADVERTISEMENT

ಬ್ಯಾಂಕ್ ಖಾಸಗೀಕರಣಕ್ಕೆ ವೇಗ

ರಾಯಿಟರ್ಸ್
Published 18 ಆಗಸ್ಟ್ 2020, 16:15 IST
Last Updated 18 ಆಗಸ್ಟ್ 2020, 16:15 IST

ನವದೆಹಲಿ/ಮುಂಬೈ: ಸರ್ಕಾರಿ ಸ್ವಾಮ್ಯದ ನಾಲ್ಕು ಬ್ಯಾಂಕ್‌ಗಳಲ್ಲಿ ಸರ್ಕಾರ ಹೊಂದಿರುವ ಷೇರುಗಳ ಪ್ರಮಾಣವನ್ನು ಕಡಿಮೆ ಮಾಡುವ ಪ್ರಕ್ರಿಯೆಗೆ ಈ ಹಣಕಾಸು ವರ್ಷ ಕೊನೆಗೊಳ್ಳುವ ಮೊದಲು ವೇಗ ನೀಡುವಂತೆ ಪ್ರಧಾನ ಮಂತ್ರಿಯವರ ಕಾರ್ಯಾಲಯವು ಅಧಿಕಾರಿಗಳಿಗೆ ಸೂಚನೆ ನೀಡಿದೆ.

ಪಂಜಾಬ್‌ ಆ್ಯಂಡ್ ಸಿಂಧ್ ಬ್ಯಾಂಕ್, ಬ್ಯಾಂಕ್ ಆಫ್ ಮಹಾರಾಷ್ಟ್ರ, ಯುಕೋ ಬ್ಯಾಂಕ್ ಮತ್ತು ಐಡಿಬಿಐ ಬ್ಯಾಂಕ್‌ಗಳಲ್ಲಿ ತನ್ನ ಪಾಲನ್ನು ಕಡಿಮೆ ಮಾಡಿಕೊಳ್ಳಲು ಸರ್ಕಾರ ಮುಂದಾಗಿದೆ ಎಂದು ಮೂಲಗಳು ತಿಳಿಸಿವೆ. ಈ ಬ್ಯಾಂಕುಗಳ ಖಾಸಗೀಕರಣ ಪ್ರಕ್ರಿಯೆಗೆ ವೇಗ ನೀಡುವಂತೆ ಸೂಚಿಸಿ ಪ್ರಧಾನ ಮಂತ್ರಿಯವರ ಕಾರ್ಯಾಲಯವು, ಕೇಂದ್ರ ಹಣಕಾಸು ಸಚಿವಾಲಯಕ್ಕೆ ಪತ್ರ ಬರೆದಿದೆ.

‘ಈ ಬ್ಯಾಂಕುಗಳ ಖಾಸಗೀಕರಣ ಪ್ರಕ್ರಿಯೆಯು ಶುರುವಾಗಿದೆ’ ಎಂದು ಮೂಲವೊಂದು ತಿಳಿಸಿದೆ. ಈ ವಿಚಾರವಾಗಿ ಬ್ಯಾಂಕುಗಳು ಹಾಗೂ ಪ್ರಧಾನ ಮಂತ್ರಿಯವರ ಕಾರ್ಯಾಲಯದಿಂದ ಪ್ರತಿಕ್ರಿಯೆ ಕೋರಿದಾಗ, ತಕ್ಷಣಕ್ಕೆ ಯಾವುದೇ ಉತ್ತರ ದೊರೆತಿಲ್ಲ. ಹಣಕಾಸು ಸಚಿವಾಲಯವು ಪ್ರತಿಕ್ರಿಯಿಸಲು ನಿರಾಕರಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.