ADVERTISEMENT

ಕಾಶ್ಮೀರಿ ಶಾಲುಗೆ ಜಿಎಸ್‌ಟಿ ಹೆಚ್ಚಳಕ್ಕೆ ವಿರೋಧ

ಪಿಟಿಐ
Published 21 ಡಿಸೆಂಬರ್ 2024, 13:42 IST
Last Updated 21 ಡಿಸೆಂಬರ್ 2024, 13:42 IST
ಮೆಹಬೂಬಾ ಮುಫ್ತಿ
ಮೆಹಬೂಬಾ ಮುಫ್ತಿ   

ಶ್ರೀನಗರ: ಕಾಶ್ಮೀರಿ ಶಾಲುಗಳ ಮೇಲೆ ಜಿಎಸ್‌ಟಿ ಹೆಚ್ಚಳಕ್ಕೆ ಪ್ರಸ್ತಾಪಿಸಲಾಗಿದೆ. ಇದರಿಂದ ಕಾಶ್ಮೀರದ ಕರಕುಶಲ ಕಲೆಗೆ ದೊಡ್ಡ ಪೆಟ್ಟು ಬೀಳಲಿದೆ ಎಂದು ಪಿಡಿ‍ಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಹೇಳಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಜನರು ಪ್ರವಾಸೋದ್ಯಮವನ್ನಷ್ಟೇ ನಂಬಿಕೊಂಡು ಜೀವನ ನಿರ್ವಹಣೆ ಮಾಡಲಿ ಎಂದು ಕೇಂದ್ರ ಸರ್ಕಾರ ಇಚ್ಛಿಸಿದಂತಿದೆ. ಈ ಬಗ್ಗೆ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರು ಕೇಂದ್ರಕ್ಕೆ ಮನವರಿಕೆ ಮಾಡಿಕೊಡಬೇಕಿದೆ ಎಂದು ಹೇಳಿದ್ದಾರೆ.

ಕಾಶ್ಮೀರಿ ಶಾಲು ಇಲ್ಲಿನ ಜನಜೀವನದ ಭಾಗವಷ್ಟೇ ಆಗಿಲ್ಲ. ಜಮ್ಮು ಮತ್ತು ಕಾಶ್ಮೀರದ ಹೆಗ್ಗುರುತಾಗಿದೆ. ಇದರ ಮಾರಾಟದ ಮೇಲಿನ ಜಿಎಸ್‌ಟಿಯನ್ನು ಶೇ 28ಕ್ಕೆ ಹೆಚ್ಚಿಸಿದರೆ ಇಲ್ಲಿನ ಕರಕುಶಲತೆಯು ನಾಶವಾಗಲಿದೆ ಎಂದು ಹೇಳಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.