ADVERTISEMENT

ಆರ್ಥಿಕ ಪ್ರಗತಿ ಸುಧಾರಣೆ ನಿರೀಕ್ಷೆ: ಆರ್‌ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾ

ಪಿಟಿಐ
Published 30 ಡಿಸೆಂಬರ್ 2024, 15:17 IST
Last Updated 30 ಡಿಸೆಂಬರ್ 2024, 15:17 IST
<div class="paragraphs"><p>ಆರ್‌ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾ</p></div>

ಆರ್‌ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾ

   

ಮುಂಬೈ: 2025ರಲ್ಲಿ ದೇಶದ ಆರ್ಥಿಕ ಬೆಳವಣಿಗೆ ಉತ್ತಮಗೊಳ್ಳುವ ನಿರೀಕ್ಷೆಯಿದೆ ಇದೆ ಎಂದು ಭಾರತೀಯ ರಿಸರ್ವ್‌ ಬ್ಯಾಂಕ್‌ನ (ಆರ್‌ಬಿಐ) ಗವರ್ನರ್ ಸಂಜಯ್ ಮಲ್ಹೋತ್ರಾ ಸೋಮವಾರ ಹೇಳಿದ್ದಾರೆ.

ದೇಶದ ಆರ್ಥಿಕ ಸ್ಥಿರತೆಯನ್ನು ಕಾಪಾಡಿಕೊಳ್ಳಲು ಬದ್ಧರಾಗಿದ್ದೇವೆ. ಜನರಲ್ಲಿ ಖರೀದಿ ಸಾಮರ್ಥ್ಯ ಹೆಚ್ಚಳವಾಗಿದ್ದು, ಆರ್ಥಿಕತೆ ಬೆಳವಣಿಗೆ ಸಾಧಿಸಲಿದೆ. ಜಾಗತಿಕ ಅನಿಶ್ಚಿತತೆಯ ಹೊರತಾಗಿಯೂ ಪ್ರಸಕ್ತ ಹಣಕಾಸು ವರ್ಷದ ದ್ವಿತೀಯಾರ್ಧದಲ್ಲಿ ಭಾರತೀಯ ಆರ್ಥಿಕತೆಯು ವೇಗವನ್ನು ಪಡೆದುಕೊಳ್ಳುವ ನಿರೀಕ್ಷೆಯಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ADVERTISEMENT

ಭಾರತದ ಮಹತ್ವಾಕಾಂಕ್ಷೆಯ ಗುರಿಗಳನ್ನು ಸಾಧಿಸಲು ಜನರ ನಂಬಿಕೆ ಮತ್ತು ವಿಶ್ವಾಸವನ್ನು ಉಳಿಸಿಕೊಳ್ಳಲಿದ್ದೇವೆ. ಆಧುನಿಕ ಹಣಕಾಸು ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಲು ಬದ್ಧರಾಗಿದ್ದೇವೆ ಎಂದು ಹೇಳಿದ್ದಾರೆ.

ಮುಂದಿನ ದಿನಗಳಲ್ಲಿ ಹಣದುಬ್ಬರದ ಕುಸಿತವು ಮುಂದುವರಿಯುವ ಸಾಧ್ಯತೆಯಿದೆ. ಇದು ಜನರಲ್ಲಿ ಖರೀದಿ ಶಕ್ತಿಯನ್ನು ಹೆಚ್ಚಿಸಲಿದೆ. ಜಾಗತಿಕ ಬಿಕ್ಕಟ್ಟು, ಪ್ರತಿಕೂಲ ಹವಾಮಾನ, ಹೆಚ್ಚುತ್ತಿರುವ ಸಾಲವು ಸಮಸ್ಯೆಯನ್ನು ಸೃಷ್ಟಿಸಬಹುದು ಎಂದು ಹೇಳಿದ್ದಾರೆ.

ಜಿಡಿಪಿ ಪ್ರಗತಿ ಶೇ 6.6ರಷ್ಟು: ಪ್ರಸಕ್ತ ಹಣಕಾಸು ವರ್ಷದಲ್ಲಿ ದೇಶದ ಒಟ್ಟು ಆಂತರಿಕ ಉತ್ಪನ್ನದ (ಜಿಡಿಪಿ) ಬೆಳವಣಿಗೆ ಶೇ 6.6ರಷ್ಟಾಗಲಿದೆ ಎಂದು ಆರ್‌ಬಿಐ ವರದಿ ಅಂದಾಜಿಸಿದೆ.

ಗ್ರಾಮೀಣ ಪ್ರದೇಶದ ಜನರಲ್ಲಿ ಸರಕುಗಳನ್ನು ಖರೀದಿಸುವ ಸಾಮರ್ಥ್ಯ ಹೆಚ್ಚಳವಾಗಿದೆ. ಸರ್ಕಾರದ ಬಂಡವಾಳ ವೆಚ್ಚ ಮತ್ತು ಹೂಡಿಕೆ ಪ್ರಮಾಣವು ಏರಿಕೆಗೊಂಡಿದೆ. ಸೇವಾ ವಲಯದ ರಫ್ತು ಸದೃಢಗೊಂಡಿದೆ ಎಂದು ವರದಿ ಹೇಳಿದೆ.

ಪ್ರಸಕ್ತ ಹಣಕಾಸು ವರ್ಷದ ಮೊದಲಾರ್ಧದಲ್ಲಿ ಜಿಡಿಪಿ ಬೆಳವಣಿಗೆ ಮಂದಗೊಂಡಿದ್ದು, ಶೇ 6ರಷ್ಟಾಗಿದೆ. 2023–24ರ ಹಣಕಾಸು ವರ್ಷದ ಮೊದಲಾರ್ಧದಲ್ಲಿ ಶೇ 8.2 ಮತ್ತು ದ್ವಿತೀಯಾರ್ಧದಲ್ಲಿ ಶೇ 8.1ರಷ್ಟಿತ್ತು ಎಂದು ಹೇಳಿದೆ.

ಮುಂಗಾರು ಮತ್ತು ಹಿಂಗಾರು ಹಂಗಾಮಿನಲ್ಲಿ ಬೆಳೆಯು ಉತ್ತಮವಾಗಿದ್ದು, ಧಾನ್ಯಗಳ ಬೆಲೆ ಇಳಿಕೆಯಾಗುವ ನಿರೀಕ್ಷೆಯಿದೆ. ಇದರಿಂದ ಹಣದುಬ್ಬರವು ಕಡಿಮೆಯಾಗಬಹುದು ಎಂದು ಹೇಳಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.