ನವದೆಹಲಿ: ಸಾರ್ವಜನಿಕ ವಲಯದ 12 ಬ್ಯಾಂಕ್‌ಗಳು 2024–25ನೇ ಆರ್ಥಿಕ ವರ್ಷದಲ್ಲಿ ಒಟ್ಟು ₹1.78 ಲಕ್ಷ ಕೋಟಿ ನಿವ್ವಳ ಲಾಭ ಗಳಿಸಿವೆ.
2023–24ನೇ ಆರ್ಥಿಕ ವರ್ಷದಲ್ಲಿ ₹1.41 ಲಕ್ಷ ಕೋಟಿ ಲಾಭ ಗಳಿಸಿದ್ದವು. ಇದಕ್ಕೆ ಹೋಲಿಸಿದರೆ ಲಾಭದ ಪ್ರಮಾಣದಲ್ಲಿ ಶೇ 26ರಷ್ಟು ಹೆಚ್ಚಳವಾಗಿದೆ.
ಈ ಲಾಭದ ಪೈಕಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಪಾಲು ಶೇ 40ರಷ್ಟಿದೆ. ಒಟ್ಟು ₹70,901 ಕೋಟಿ ಲಾಭ ಗಳಿಸಿದೆ. 2023–24ರಲ್ಲಿ ₹61,077 ಕೋಟಿ ಲಾಭ ಗಳಿಸಿತ್ತು.
ಪಂಜಾಬ್ ನ್ಯಾಷನಲ್ ಬ್ಯಾಂಕ್ ₹16,630 ಕೋಟಿ, ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ₹3,785 ಕೋಟಿ, ಯುಕೊ ಬ್ಯಾಂಕ್ ₹2,445 ಕೋಟಿ, ಬ್ಯಾಂಕ್ ಆಫ್ ಇಂಡಿಯಾ ₹9,219 ಕೋಟಿ, ಬ್ಯಾಂಕ್ ಆಫ್ ಮಹಾರಾಷ್ಟ್ರ ₹5,520 ಕೋಟಿ, ಇಂಡಿಯನ್ ಬ್ಯಾಂಕ್ ₹10,918 ಕೋಟಿ ಗಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.