ADVERTISEMENT

ಪಂಜಾಬ್‌ ಆ್ಯಂಡ್‌ ಸಿಂಧ್ ಬ್ಯಾಂಕ್‌ ಪರಿಶೀಲನಾ ಸಭೆ

​ಪ್ರಜಾವಾಣಿ ವಾರ್ತೆ
Published 8 ಸೆಪ್ಟೆಂಬರ್ 2021, 16:15 IST
Last Updated 8 ಸೆಪ್ಟೆಂಬರ್ 2021, 16:15 IST

ಬೆಂಗಳೂರು: ಪಂಜಾಬ್‌ ಆ್ಯಂಡ್‌ ಸಿಂಧ್ ಬ್ಯಾಂಕ್‌ನ ಕಾರ್ಯನಿರ್ವಾಹಕ ನಿರ್ದೇಶಕ ಕೊಳ್ಳೇಗಾಲ ವಿ. ರಾಘವೇಂದ್ರ ಅವರು ಬುಧವಾರ ಬೆಂಗಳೂರಿನಲ್ಲಿ ಪರಿಶೀಲನಾ ಸಭೆ ನಡೆಸಿದರು. ಬ್ಯಾಂಕ್‌ನ ಅಧಿಕಾರಿಗಳನ್ನು ಹಾಗೂ ಗ್ರಾಹಕರನ್ನು ಭೇಟಿ ಮಾಡಿದರು. ಸ್ಥಳೀಯ ಶಾಖೆಗಳ ಪರಿಶೀಲನಾ ಸಭೆಯನ್ನು ಸಹ ನಡೆಸಲಾಯಿತು.

‘ಆತ್ಮನಿರ್ಭರ ಭಾರತ’ ಯೋಜನೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ, ಬ್ಯಾಂಕ್‌ನಿಂದ ಒದಗಿಸುತ್ತಿರುವ ಸೇವೆಗಳ ಬಗ್ಗೆ ಗ್ರಾಹಕರಿಂದ ಮಾಹಿತಿ ಪಡೆದುಕೊಂಡರು. ತಮ್ಮ ಬ್ಯಾಂಕ್ ಜೂನ್ ತ್ರೈಮಾಸಿಕದಲ್ಲಿ ₹ 174 ಕೋಟಿ ನಿವ್ವಳ ಲಾಭ ಗಳಿಸಿದೆ. ಈ ಅವಧಿಯಲ್ಲಿ ಎಲ್ಲಾ ಮಾನದಂಡಗಳಲ್ಲಿಯೂ ಉತ್ತಮ ಕಾರ್ಯದಕ್ಷತೆ ತೋರಿದೆ ಎಂದು ರಾಘವೇಂದ್ರ ಅವರು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT