ನವದೆಹಲಿ: ಪಂಜಾಬ್ ನ್ಯಾಷನಲ್ ಬ್ಯಾಂಕ್ (ಪಿಎನ್‌ಬಿ) ಪ್ರಸಕ್ತ ಹಣಕಾಸು ವರ್ಷದ ಮೂರನೇ ತ್ರೈಮಾಸಿಕದಲ್ಲಿ ₹ 492 ಕೋಟಿ ನಷ್ಟ ಅನುಭವಿಸಿದೆ.
ಹಿಂದಿನ ಹಣಕಾಸು ವರ್ಷದ ಇದೇ ಅವಧಿಯಲ್ಲಿ ₹ 246 ಕೋಟಿ ನಿವ್ವಳ ಲಾಭ ಗಳಿಸಿತ್ತು.
ಭವಿಷ್ಯದಲ್ಲಿ ಎದುರಾಗಬಹುದಾದ ಆರ್ಥಿಕ ನಷ್ಟ ಭರಿಸಲು ತೆಗೆದಿರಿಸುವ ಮೊತ್ತ ₹ 2,565 ಕೋಟಿಗಳಿಂದ
₹ 14,854 ಕೋಟಿಗಳಿಗೆ ಭಾರಿ ಏರಿಕೆ ಕಂಡಿದೆ. ಇದರಿಂದಾಗಿ ನಷ್ಟ ಆಗಿದೆ ಎಂದು ತಿಳಿಸಿದೆ.
ವಸೂಲಾಗದ ಸಾಲದ (ಎನ್‌ಪಿಎ) ಸರಾಸರಿ ಪ್ರಮಾಣ ಶೇ 16.33 ರಿಂದ ಶೇ 16.30ಕ್ಕೆ ಅಲ್ಪ ಇಳಿಕೆ ಕಂಡಿದೆ. ನಿವ್ವಳ ಎನ್‌ಪಿಎ ಶೇ 8.22ರಿಂದಶೇ 7.18ಕ್ಕೆ ಕಡಿಮೆಯಾಗಿದೆ ಎಂದು ಷೇರುಪೇಟೆಗೆ ಹೇಳಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.