ಬೆಂಗಳೂರು: ರಿಯಲ್ ಎಸ್ಟೇಟ್ ಸಂಸ್ಥೆ ಪುರವಂಕರ ಲಿಮಿಟೆಡ್, ನಾಲ್ಕನೆ ತ್ರೈಮಾಸಿಕದಲ್ಲಿ ₹ 38.78 ಕೋಟಿ ನಿವ್ವಳ ಲಾಭ ಗಳಿಸಿದೆ.
ಹಿಂದಿನ ವರ್ಷದ ಇದೇ ಅವಧಿಯಲ್ಲಿನ ₹ 24.55 ಕೋಟಿ ನಿವ್ವಳ ಲಾಭಕ್ಕೆ ಹೋಲಿಸಿದರೆ ಈ ಬಾರಿ ಶೇ 58ರಷ್ಟು ಹೆಚ್ಚಳ ದಾಖಲಿಸಿದೆ. ಸಂಸ್ಥೆಯ ವರಮಾನವು ಹಿಂದಿನ ಹಣಕಾಸು ವರ್ಷದಲ್ಲಿನ ₹323.25 ಕೋಟಿಗೆ ಹೋಲಿಸಿದರೆ ಈ ಬಾರಿ ₹667.08 ಕೋಟಿಗಳಷ್ಟಾಗಿ ದುಪ್ಪಟ್ಟಾಗಿದೆ. 2018–19ರಲ್ಲಿನ ವಾರ್ಷಿಕ ನಿವ್ವಳ ಲಾಭವು, ಶೇ 25ರಷ್ಟು ಏರಿಕೆಯಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.