ADVERTISEMENT

ಪ್ರಯಾಣಿಕ ವಾಹನ ಮಾರಾಟ ಶೇ 14ರಷ್ಟು ಹೆಚ್ಚಳ

​ಪ್ರಜಾವಾಣಿ ವಾರ್ತೆ
Published 14 ಫೆಬ್ರುವರಿ 2024, 16:20 IST
Last Updated 14 ಫೆಬ್ರುವರಿ 2024, 16:20 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ನವದೆಹಲಿ (ಪಿಟಿಐ): ಯುಟಿಲಿಟಿ ವಾಹನಗಳಿಗೆ ಬೇಡಿಕೆ ಹೆಚ್ಚಾಗಿರುವುದರಿಂದ ದೇಶೀಯ ಪ್ರಯಾಣಿಕ ವಾಹನಗಳ ಸಗಟು ಮಾರಾಟವು ಜನವರಿಯಲ್ಲಿ ಶೇ 14ರಷ್ಟು ಏರಿಕೆಯಾಗಿದೆ ಎಂದು ಭಾರತೀಯ ವಾಹನ ತಯಾರಕರ ಒಕ್ಕೂಟವು (ಎಸ್‌ಐಎಎಂ) ಬುಧವಾರ ತಿಳಿಸಿದೆ.

ಜನವರಿಯಲ್ಲಿ ಒಟ್ಟು 3,93,074 ವಾಹನಗಳು ಮಾರಾಟವಾಗಿವೆ. ಹಿಂದಿನ ವರ್ಷದ ಇದೇ ತಿಂಗಳಲ್ಲಿ 3,46,080 ವಾಹನಗಳು ಮಾರಾಟವಾಗಿದ್ದವು ಎಂದು ತಿಳಿಸಿದೆ.

ದ್ವಿಚಕ್ರ ವಾಹನಗಳ ಮಾರಾಟದಲ್ಲಿ ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ ಶೇ 26ರಷ್ಟು ಹೆಚ್ಚಾಗಿದೆ. ಒಟ್ಟು 14,95,183 ದ್ವಿಚಕ್ರ ವಾಹನಗಳು ಮಾರಾಟವಾಗಿವೆ. ಹಿಂದಿನ ವರ್ಷದ ಇದೇ ಅವಧಿಯಲ್ಲಿ 11,84,376 ದ್ವಿಚಕ್ರ ವಾಹನಗಳು ಮಾರಾಟವಾಗಿದ್ದವು.

ADVERTISEMENT

ತ್ರಿಚಕ್ರ ವಾಹನಗಳ ಮಾರಾಟವು ಶೇ 9ರಷ್ಟು ಹೆಚ್ಚಾಗಿದ್ದು, ಒಟ್ಟು 53,537 ವಾಹನಗಳು ಮಾರಾಟವಾಗಿವೆ. ಹಿಂದಿನ ವರ್ಷದ ಇದೇ ಅವಧಿಯಲ್ಲಿ 48,903 ವಾಹನ ಮಾರಾಟವಾಗಿದ್ದವು ಎಂದು ಒಕ್ಕೂಟ ತಿಳಿಸಿದೆ.

ಜನವರಿಯಲ್ಲಿ ಮಾರುತಿ ಸುಜುಕಿ ಇಂಡಿಯಾದ 1,66,802, ಹುಂಡೈ ಮೋಟರ್‌ ಇಂಡಿಯಾದ 57,115 ವಾಹನಗಳು ಮಾರಾಟವಾಗಿವೆ.

ದ್ವಿಚಕ್ರ ವಾಹನ ವಿಭಾಗದಲ್ಲಿ ಹೀರೊ ಮೋಟೊಕಾರ್ಪ್‌ 3,89,752, ಹೋಂಡಾ ಮೋಟರ್‌ ಸೈಕಲ್‌ ಆ್ಯಂಡ್‌ ಸ್ಕೂಟರ್‌ ಇಂಡಿಯಾ 1,83,638, ಬಜಾಜ್‌ ಆಟೊ 1,78,056, ಟಿವಿಎಸ್‌ 1,24,664 ಹಾಗೂ ಸುಜುಕಿ ಮೋಟರ್‌ ಸೈಕಲ್‌ ಇಂಡಿಯಾದ 78,477 ದ್ವಿಚಕ್ರ ವಾಹನಗಳು ಮಾರಾಟವಾಗಿವೆ ಎಂದು ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.