ADVERTISEMENT

ಕೇಂದ್ರಕ್ಕೆ ₹87 ಸಾವಿರ ಕೋಟಿ ಲಾಭಾಂಶ: ಆರ್‌ಬಿಐ

ಪಿಟಿಐ
Published 19 ಮೇ 2023, 13:02 IST
Last Updated 19 ಮೇ 2023, 13:02 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ಮುಂಬೈ: 2022–23ರಲ್ಲಿ ಕೇಂದ್ರ ಸರ್ಕಾರಕ್ಕೆ ₹87,416 ಕೋಟಿ ಲಾಭಾಂಶ ಪಾವತಿಸಲು ಭಾರತೀಯ ರಿಸರ್ವ್ ಬ್ಯಾಂಕ್‌ (ಆರ್‌ಬಿಐ) ಶುಕ್ರವಾರ ಒಪ್ಪಿಗೆ ನೀಡಿದೆ.

2021–22ರಲ್ಲಿ ಆರ್‌ಬಿಐ ಲಾಭಾಂಶದ ರೂಪದಲ್ಲಿ ₹30,307 ಕೋಟಿ ಆರ್‌ಬಿಐ ಸರ್ಕಾರಕ್ಕೆ ನೀಡಿತ್ತು. ಈ ಮೊತ್ತಕ್ಕೆ ಹೋಲಿಸಿದರೆ 2022–23ರಲ್ಲಿ ನೀಡುವ ಮೊತ್ತದಲ್ಲಿ ಸುಮಾರು ಮೂರು ಪಟ್ಟು ಏರಿಕೆ ಕಂಡುಬಂದಿದೆ.

ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್‌ ನೇತೃತ್ವದಲ್ಲಿ ನಡೆದ ನಿರ್ದೇಶಕ ಮಂಡಳಿ ಸಭೆಯಲ್ಲಿ ಲಾಭಾಂಶ ನೀಡುವ ನಿರ್ಧಾರವನ್ನು ತೆಗೆದುಕೊಳ್ಳಲಾಯಿತು. ಜಾಗತಿಕ ಮತ್ತು ದೇಶದ ಆರ್ಥಿಕ ಸ್ಥಿತಿ, ಸವಾಲುಗಳು ಮತ್ತು ಸದ್ಯದ ಜಾಗತಿಕ ರಾಜಕೀಯ ಬೆಳವಣಿಗೆಗಳ ಪರಿಣಾಮಗಳ ಕುರಿತಾಗಿಯೂ ಸಭೆಯಲ್ಲಿ ಚರ್ಚಿಸಲಾಯಿತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.