ಮುಂಬೈ: ಗವರ್ನರ್ ಶಕ್ತಿಕಾಂತ ದಾಸ್ ಅವರ ಡೀಪ್‌ಫೇಕ್ ವಿಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಈ ಬಗ್ಗೆ ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು ಎಂದು ಭಾರತೀಯ ರಿಸರ್ವ್ ಬ್ಯಾಂಕ್ ತಿಳಿಸಿದೆ.
ದಾಸ್ ಅವರು ಕೆಲವು ಹೊಸ ಹೂಡಿಕೆ ಯೋಜನೆಗಳಿಗೆ ಚಾಲನೆ ನೀಡಿದ್ದಾರೆ ಅಥವಾ ಅಂತಹ ಯೋಜನೆಗಳಲ್ಲಿ ಸಾರ್ವಜನಿಕರು ಹೂಡಿಕೆ ಮಾಡುವಂತೆ ಹೇಳಿದ್ದಾರೆ ಎಂಬ ಬಗ್ಗೆ ಕೃತಕ ಬುದ್ಧಿಮತ್ತೆ ಬಳಸಿ ಡೀಪ್‌ಫೇಕ್ ವಿಡಿಯೊಗಳನ್ನು ಸೃಷ್ಟಿಸಲಾಗಿದೆ ಎಂದು ಹೇಳಿದೆ.
ಹಣಕಾಸು ಹೂಡಿಕೆಗೆ ಸಂಬಂಧಿಸಿದಂತೆ ಆರ್‌ಬಿಐ ನಾಗರಿಕರಿಗೆ ಯಾವುದೇ ಸಲಹೆ ನೀಡುವುದಿಲ್ಲ. ದಾಸ್ ಅವರು ಯಾವುದೇ ಹೂಡಿಕೆ ಯೋಜನೆಗಳಿಗೆ ಬೆಂಬಲ ನೀಡಿಲ್ಲ. ಇಂತಹ ನಕಲಿ ವಿಡಿಯೊಗಳ ಬಗ್ಗೆ ಜಾಗರೂಕವಾಗಿರಬೇಕು ಎಂದು ಹೇಳಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.