ADVERTISEMENT

ಆರ್‌ಬಿಐನಿಂದ ಡಿಜಿಟಲ್ ಕರೆನ್ಸಿ ಶೀಘ್ರ: ಆರ್‌ಬಿಐ ಡೆಪ್ಯುಟಿ ಗವರ್ನರ್‌

ಪಿಟಿಐ
Published 23 ಜುಲೈ 2021, 2:37 IST
Last Updated 23 ಜುಲೈ 2021, 2:37 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ    

ನವದೆಹಲಿ: ಭಾರತೀಯ ರಿಸರ್ವ್‌ ಬ್ಯಾಂಕ್‌ (ಆರ್‌ಬಿಐ) ತನ್ನದೇ ಆದ ಡಿಜಿಟಲ್ ಕರೆನ್ಸಿಯನ್ನು ಸಗಟು ಮತ್ತು ಚಿಲ್ಲರೆ ವ್ಯಾಪಾರ ವಲಯಗಳಿಗೆ ಶೀಘ್ರವಾಗಿ, ಹಂತ ಹಂತವಾಗಿ ಚಲಾವಣೆ ತರಲು ಕೆಲಸ ನಡೆಸಿದೆ ಎಂದು ಆರ್‌ಬಿಐ ಡೆಪ್ಯುಟಿ ಗವರ್ನರ್‌ಟಿ. ರವಿಶಂಕರ್ ತಿಳಿಸಿದ್ದಾರೆ.

ವಿಶ್ವದ ಹಲವು ಕೇಂದ್ರೀಯ ಬ್ಯಾಂಕ್‌ಗಳು ತಮ್ಮದೇ ಆದ ಡಿಜಿಟಲ್ ಕರೆನ್ಸಿಯನ್ನು ರೂಪಿಸುತ್ತಿವೆ ಎಂದೂ ಅವರು ಹೇಳಿದ್ದಾರೆ. ಕೆಲವು ವರ್ಚುವಲ್‌ ಕರೆನ್ಸಿಗಳ ಮೌಲ್ಯದಲ್ಲಿ ಕಂಡುಬರುತ್ತಿರುವ ಭಾರಿ ಅಸ್ಥಿರತೆಯಿಂದ ಗ್ರಾಹಕರನ್ನು ರಕ್ಷಿಸಲು ಕೇಂದ್ರೀಯ ಬ್ಯಾಂಕ್‌ಗಳು ತಮ್ಮದೇ ಆದ ಡಿಜಿಟಲ್ ಕರೆನ್ಸಿ ಹೊಂದುವುದು ಅಗತ್ಯ ಎಂದು ರವಿಶಂಕರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಕೇಂದ್ರ ಹಣಕಾಸು ಸಚಿವಾಲಯ ರಚಿಸಿರುವ ಅಂತರ ಸಚಿವಾಲಯದ ಸಮಿತಿಯೊಂದು, ಕೇಂದ್ರೀಯ ಬ್ಯಾಂಕ್‌ ವತಿಯಿಂದ ಡಿಜಿಟಲ್ ಕರೆನ್ಸಿಯನ್ನು ಚಲಾವಣೆಗೆ ತರಬೇಕು ಎಂದು ಶಿಫಾರಸು ಮಾಡಿದೆ. ‘ಈ ಬಗೆಯ ಕರೆನ್ಸಿಯನ್ನು ಚಲಾವಣೆಗೆ ಬಿಡುವುದರ ಸಾಧಕ, ಬಾಧಕವನ್ನು ಆರ್‌ಬಿಐ ಪರಿಶೀಲಿಸುತ್ತಿದೆ’ ಎಂದು ಅವರು ಹೇಳಿದ್ದಾರೆ.

ADVERTISEMENT

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.