ADVERTISEMENT

ಎಚ್‌ಡಿಎಫ್‌ಸಿ ಬ್ಯಾಂಕ್‌ ಮೇಲಿನ ನಿರ್ಬಂಧ ತೆರವು

ಪಿಟಿಐ
Published 12 ಮಾರ್ಚ್ 2022, 17:02 IST
Last Updated 12 ಮಾರ್ಚ್ 2022, 17:02 IST

ನವದೆಹಲಿ: ತನ್ನ ಮೇಲಿನ ಎಲ್ಲಾ ನಿರ್ಬಂಧಗಳನ್ನೂ ಆರ್‌ಬಿಐ ತೆರವು ಮಾಡಿದ್ದು, ಹೊಸ ಡಿಜಿಟಿಲ್‌ ಉತ್ಪನ್ನಗಳನ್ನು ಬಿಡುಗಡೆ ಮಾಡಲು ಅನುಮತಿಯನ್ನೂ ನೀಡಿದೆ ಎಂದು ಎಚ್‌ಡಿಎಫ್‌ಸಿ ಬ್ಯಾಂಕ್‌ ಶನಿವಾರ ತಿಳಿಸಿದೆ.

ತಾಂತ್ರಿಕ ಸಮಸ್ಯೆಗಳ ಕಾರಣಕ್ಕಾಗಿ ಆರ್‌ಬಿಐ 2020ರ ಡಿಸೆಂಬರ್‌ನಲ್ಲಿ ಎಚ್‌ಡಿಎಫ್‌ಸಿ ಬ್ಯಾಂಕ್ ವಿರುದ್ಧ ಕೆಲವು ಕಠಿಣ ಕ್ರಮಗಳನ್ನು ಜರುಗಿಸಿತ್ತು. ಈ ಬ್ಯಾಂಕ್‌ ಹೊಸದಾಗಿ ಡಿಜಿಟಲ್ ಉತ್ಪನ್ನಗಳನ್ನು ಅಥವಾ ಸೇವೆಗಳನ್ನು ಬಿಡುಗಡೆ ಮಾಡುವಂತಿಲ್ಲ, ಹೊಸದಾಗಿ ಕ್ರೆಡಿಟ್ ಕಾರ್ಡ್ ವಿತರಣೆ ಮಾಡುವಂತೆ ಇಲ್ಲ ಎಂದು ಆರ್‌ಬಿಐ ತಾಕೀತು ಮಾಡಿತ್ತು.

ಹಣಕಾಸು ಸೇವೆಗಳನ್ನು ಯಾವುದೇ ಅಡೆತಡೆ ಇಲ್ಲದೇ ಗ್ರಾಹಕರಿಗೆ ಸಿಗುವಂತೆ ಮಾಡಲು ಡಿಜಿಟಲ್‌ 2.0 ಕಾರ್ಯಕ್ರಮವನ್ನು ರೂಪಿಸಲಾಗಿದೆ ಎಂದು ಬ್ಯಾಂಕ್‌ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.