ADVERTISEMENT

ಶೇ 0.35ರಷ್ಟು ಬಡ್ಡಿದರ ಹೆಚ್ಚಳ ಸಾಧ್ಯತೆ

ಪಿಟಿಐ
Published 31 ಜುಲೈ 2022, 13:50 IST
Last Updated 31 ಜುಲೈ 2022, 13:50 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಮುಂಬೈ: ಚಿಲ್ಲರೆ ಹಣದುಬ್ಬರವನ್ನು ನಿಯಂತ್ರಿಸಲು ಭಾರತೀಯ ರಿಸರ್ವ್‌ ಬ್ಯಾಂಕ್‌ (ಆರ್‌ಬಿಐ) ಮುಂಬರುವ ಹಣಕಾಸು ನೀತಿ ಸಮಿತಿ (ಎಂಪಿಸಿ) ಸಭೆಯಲ್ಲಿ ಶೇಕಡ 0.25ರಿಂದ ಶೇ 0.35ರವರೆಗೆ ರೆಪೊ ದರ ಹೆಚ್ಚಿಸುವ ಸಾಧ್ಯತೆ ಇದೆ ಎಂದು ಮಾರುಕಟ್ಟೆ ತಜ್ಞರು ಹೇಳಿದ್ದಾರೆ.

ಎಂಪಿಸಿಯು ರೆಪೊ ದರವನ್ನು ಶೇ 0.35ರಷ್ಟು ಹೆಚ್ಚಿಸುವ ನಿರೀಕ್ಷೆ ಇದೆ ಎಂದು ಬಿಒಎಫ್‌ಎ ಗ್ಲೋಬಲ್‌ ರಿಸರ್ಚ್‌ ವರದಿ ಹೇಳಿದೆ. ಎಂಪಿಸಿ ಸಭೆಯು ಬುಧವಾರದಿಂದ ಶುಕ್ರವಾರದವರೆಗೆ ನಡೆಯಲಿದೆ. ಚಿಲ್ಲರೆ ಹಣದುಬ್ಬರ ಪ್ರಮಾಣವು ಶೇ 6ಕ್ಕಿಂತಲೂ ಹೆಚ್ಚಿನ ಮಟ್ಟದಲ್ಲಿ ಇದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT