
ಪ್ರಜಾವಾಣಿ ವಾರ್ತೆ
ಬೆಂಗಳೂರು: ಗ್ರಾಹಕ ಬೆಲೆ ಸೂಚ್ಯಂಕ (ಸಿಪಿಐ) ಆಧಾರಿತ ಚಿಲ್ಲರೆ ಹಣದುಬ್ಬರ ದರವು 2025–26ರ ಆರ್ಥಿಕ ವರ್ಷದಲ್ಲಿ ಶೇ 2.1ರಷ್ಟಾಗಲಿದೆ ಎಂದು ಆರ್‌ಬಿಐ ಅಂದಾಜಿಸಿದೆ. ಪ್ರಸಕ್ತ ಮಾರ್ಚ್ ತ್ರೈಮಾಸಿಕದಲ್ಲಿ ಹಣದುಬ್ಬರ ಶೇ 3ಕ್ಕೂ ಹೆಚ್ಚಿರಲಿದೆ ಎಂದು ಹೇಳಿದೆ.
2026–27ರ ಆರ್ಥಿಕ ವರ್ಷದ ಮೊದಲ ಮತ್ತು ಎರಡನೇ ತ್ರೈಮಾಸಿಕದಲ್ಲಿ ಹಣದುಬ್ಬರವು ಕ್ರಮವಾಗಿ ಶೇ 4 ಮತ್ತು ಶೇ 4.2ರಷ್ಟಾಗಬಹುದು ಎಂದು ಹೇಳಿದೆ.
ಕಳೆದ ಡಿಸೆಂಬರ್‌ನಲ್ಲಿ ಆರ್‌ಬಿಐ, 2025–26ರಲ್ಲಿ ಚಿಲ್ಲರೆ ಹಣದುಬ್ಬರ ಶೇ 2ರಷ್ಟಾಗಲಿದೆ. ಇದು ಮುಂದಿನ ಆರ್ಥಿಕ ವರ್ಷದ ಮೊದಲ ಮತ್ತು ಎರಡನೇ ತ್ರೈಮಾಸಿಕದಲ್ಲಿ ಕ್ರಮವಾಗಿ ಶೇ 3.9 ಮತ್ತು ಶೇ 4ರಷ್ಟಾಗಬಹುದು ಎಂದು ಹೇಳಿತ್ತು.
ಅಮೂಲ್ಯ ಲೋಹಗಳ ಬೆಲೆಯಲ್ಲಿ ಹೆಚ್ಚಳವಾಗಿದೆ. ಇದು ಚಿಲ್ಲರೆ ಹಣದುಬ್ಬರ ಏರಿಕೆಗೆ ಒಂದು ಕಾರಣ ಎಂದು ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.