ADVERTISEMENT

ಎಚ್‌ಡಿಎಫ್‌ಸಿ ಬ್ಯಾಂಕ್‌ನ ಹೊಸ ಡಿಜಿಟಲ್‌ ಸೇವೆಗೆ ತಾತ್ಕಾಲಿಕ ತಡೆ

ಪಿಟಿಐ
Published 3 ಡಿಸೆಂಬರ್ 2020, 18:20 IST
Last Updated 3 ಡಿಸೆಂಬರ್ 2020, 18:20 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ನವದೆಹಲಿ: ಡಿಜಿಟಲ್‌ ಬ್ಯಾಂಕಿಂಗ್‌ನ ಯಾವುದೇ ಹೊಸ ಉಪಕ್ರಮಗಳನ್ನು ಜಾರಿಗೊಳಿಸದಂತೆ ಭಾರತೀಯ ರಿಸರ್ವ್‌ ಬ್ಯಾಂಕ್‌ (ಆರ್‌ಬಿಐ), ಎಚ್‌ಡಿಎಫ್‌ಸಿ ಬ್ಯಾಂಕ್‌ಗೆ ತಾತ್ಕಾಲಿಕ ನಿರ್ಬಂಧ ವಿಧಿಸಿದೆ.

ನವೆಂಬರ್‌ 21ರಂದು ಇಂಟರ್‌ನೆಟ್‌ ಬ್ಯಾಂಕಿಂಗ್‌, ಮೊಬೈಲ್‌ ಬ್ಯಾಂಕಿಂಗ್ ಮತ್ತು ಇತರೆ ಪಾವತಿ ಸೇವೆಗಳಲ್ಲಿ ವ್ಯತ್ಯಯ ಆಗಿತ್ತು. ಅಲ್ಲದೆ, ಕಳೆದ ಎರಡು ವರ್ಷಗಳಿಂದ ಬ್ಯಾಂಕ್‌ನ ಡಿಜಿಟಲ್‌ ಸೇವೆಗಳಲ್ಲಿ ಸಮಸ್ಯೆ ಆಗುತ್ತಿರುವುದನ್ನು ಗಮನದಲ್ಲಿ ಇಟ್ಟುಕೊಂಡು ಆರ್‌ಬಿಐ ಈ ಕ್ರಮ ಕೈಗೊಂಡಿದೆ.

ತನ್ನ ದತ್ತಾಂಶ ಕೇಂದ್ರದಲ್ಲಿ ವಿದ್ಯುತ್‌ ವ್ಯತ್ಯಯ ಆಗಿದ್ದರಿಂದಾಗಿ ನವೆಂಬರ್‌ 21ರಂದು ಗ್ರಾಹಕರು ಸಮಸ್ಯೆ ಎದುರಿಸುವಂತಾಗಿತ್ತು ಎಂದು ಬ್ಯಾಂಕ್‌ ತಿಳಿಸಿದೆ. ತಡೆರಹಿತ ಡಿಜಿಟಲ್‌ ಸೇವೆಗಳನ್ನು ನೀಡುವ ನಿಟ್ಟಿನಲ್ಲಿ ಬಹಳ ಎಚ್ಚರಿಕೆಯಿಂದ ಕ್ರಮಗಳನ್ನು ತೆಗೆದುಕೊಳ್ಳುತ್ತಿರುವುದಾಗಿ ಬ್ಯಾಂಕ್‌ ಷೇರುಪೇಟೆಗೆ ತಿಳಿಸಿದೆ.

ಸಮಸ್ಯೆಗಳನ್ನು ಬಗೆಹರಿಸುವ ಜವಾಬ್ದಾರಿ ನಿರ್ವಹಿಸುವಂತೆ ಎಚ್‌ಡಿಎಫ್‌ಸಿ ಬ್ಯಾಂಕ್‌ಗೆ ಆರ್‌ಬಿಐ ಸೂಚಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.