ADVERTISEMENT

RBIನ ನೂತನ ಗವರ್ನರ್‌ ಸಹಿ ಇರುವ ₹50 ಮುಖಬೆಲೆಯ ಹೊಸ ನೋಟು ಬಿಡುಗಡೆ ಶೀಘ್ರ

​ಪ್ರಜಾವಾಣಿ ವಾರ್ತೆ
Published 12 ಫೆಬ್ರುವರಿ 2025, 12:51 IST
Last Updated 12 ಫೆಬ್ರುವರಿ 2025, 12:51 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ಮುಂಬೈ: ಗವರ್ನರ್‌ ಸಂಜಯ್‌ ಮಲ್ಹೋತ್ರಾ ಅವರ ಸಹಿ ಇರುವ ₹50 ಮುಖಬೆಲೆಯ ಹೊಸ ನೋಟುಗಳನ್ನು ಶೀಘ್ರವೇ ಬಿಡುಗಡೆ ಮಾಡಲಾಗುವುದು ಎಂದು ಭಾರತೀಯ ರಿಸರ್ವ್‌ ಬ್ಯಾಂಕ್‌ (ಆರ್‌ಬಿಐ) ಬುಧವಾರ ತಿಳಿಸಿದೆ.

ಗವರ್ನರ್‌ ಆಗಿದ್ದ ಶಕ್ತಿಕಾಂತ ದಾಸ್‌ ಅವರ ಅಧಿಕಾರಾವಧಿ ಪೂರ್ಣಗೊಂಡ ಬಳಿಕ ಕಳೆದ ವರ್ಷದ ಡಿಸೆಂಬರ್‌ನಲ್ಲಿ ಮಲ್ಹೋತ್ರಾ ಅಧಿಕಾರವಹಿಸಿಕೊಂಡಿದ್ದಾರೆ.

ಮಹಾತ್ಮ ಗಾಂಧಿ ಅವರ ಭಾವಚಿತ್ರ ಇರುವ ನೋಟುಗಳ ಸರಣಿಯಂತೆಯೇ ಈ ಹೊಸ ನೋಟುಗಳನ್ನು ವಿನ್ಯಾಸಗೊಳಿಸಲಾಗಿದೆ. ಹಳೆಯ ನೋಟುಗಳಿಗೆ ಅನ್ವಯಿಸುವ ನಿಯಮಾವಳಿಗಳು ಇವುಗಳಿಗೂ ಅನ್ವಯವಾಗಲಿವೆ ಎಂದು ತಿಳಿಸಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.