
ಭಾರತೀಯ ರಿಸರ್ವ್ ಬ್ಯಾಂಕ್
ಮುಂಬೈ (ಪಿಟಿಐ): ಒಂಬುಡ್ಸ್‌ಮನ್ ವ್ಯವಸ್ಥೆಯಲ್ಲಿ ಒಂದು ತಿಂಗಳಿಗಿಂತ ಹೆಚ್ಚಿನ ಅವಧಿಯಿಂದ ಬಾಕಿ ಉಳಿದಿರುವ ದೂರುಗಳನ್ನು ಇತ್ಯರ್ಥಪಡಿಸಲು ಭಾರತೀಯ ರಿಸರ್ವ್ ಬ್ಯಾಂಕ್ ಅಭಿಯಾನವೊಂದನ್ನು ಆರಂಭಿಸಲಿದೆ.
ಈ ಅಭಿಯಾನವು ಮುಂದಿನ ತಿಂಗಳು ಆರಂಭವಾಗಲಿದ್ದು, ಎರಡು ತಿಂಗಳ ಅವಧಿಗೆ ನಡೆಯಲಿದೆ. ಆರ್‌ಬಿಐನ ಒಂಬುಡ್ಸ್‌ಮನ್ ವ್ಯವಸ್ಥೆಯು ಗ್ರಾಹಕರ ದೂರುಗಳನ್ನು ಉಚಿತವಾಗಿ ಪರಿಹರಿಸಿಕೊಡುವ ಕೆಲಸ ಮಾಡುತ್ತದೆ.
‘ನಾವು ಗ್ರಾಹಕ ಸೇವೆಗಳನ್ನು ಸುಧಾರಿಸುವ ಕಡೆ ಗಮನ ಹರಿಸುತ್ತಿದ್ದೇವೆ. ಈ ವಿಚಾರವಾಗಿ ಹಲವು ಕ್ರಮಗಳನ್ನು ಕೈಗೊಂಡಿದ್ದೇವೆ’ ಎಂದು ಆರ್‌ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾ ಅವರು ಸುದ್ದಿಗಾರರಿಗೆ ತಿಳಿಸಿದ್ದಾರೆ.
‘ಶೇಕಡ 99.8ರಷ್ಟಕ್ಕಿಂತ ಹೆಚ್ಚಿನ ಪ್ರಮಾಣದ ದೂರುಗಳನ್ನು ನಿಗದಿತ ಅವಧಿಯಲ್ಲಿ ಇತ್ಯರ್ಥಪಡಿಸಲಾಗುತ್ತಿದೆ’ ಎಂದು ಮಲ್ಹೋತ್ರಾ ತಿಳಿಸಿದ್ದಾರೆ.
ಆದರೆ ಈಚಿನ ದಿನಗಳಲ್ಲಿ ದೂರುಗಳು ದಾಖಲಾಗುವುದು ಹೆಚ್ಚಾಗಿರುವ ಕಾರಣದಿಂದಾಗಿ ಆರ್‌ಬಿಐ ಒಂಬುಡ್ಸ್‌ಮನ್ ವ್ಯವಸ್ಥೆಯಲ್ಲಿ ದೂರುಗಳು ಬಾಕಿಯಾಗುವುದು ಹೆಚ್ಚಾಗಿದೆ ಎಂದೂ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.