ADVERTISEMENT

ಕುಸುಬೆ ಖರೀದಿಗೆ ನೋಂದಣಿ ಶೀಘ್ರ: ಸಚಿವ ಶಿವಾನಂದ ಪಾಟೀಲ

​ಪ್ರಜಾವಾಣಿ ವಾರ್ತೆ
Published 12 ಮಾರ್ಚ್ 2025, 14:39 IST
Last Updated 12 ಮಾರ್ಚ್ 2025, 14:39 IST
ಶಿವಾನಂದ ಪಾಟೀಲ
ಶಿವಾನಂದ ಪಾಟೀಲ   

ಬೆಂಗಳೂರು: ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಶೀಘ್ರವೇ ಕುಸುಬೆ ಖರೀದಿ ಪ್ರಕ್ರಿಯೆ ಆರಂಭವಾಗಲಿದ್ದು, ರೈತರು ಹೆಸರು ನೋಂದಣಿ ಮಾಡಿಕೊಳ್ಳಬೇಕು ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಕೋರಿದ್ದಾರೆ.

ಪ್ರತಿ ಕ್ವಿಂಟಲ್‌ಗೆ ₹5,940 ಬೆಂಬಲ ಬೆಲೆ ನಿಗದಿಪಡಿಸಲಾಗಿದೆ. ಪ್ರತಿ ಎಕರೆಗೆ ಐದು ಕ್ವಿಂಟಲ್‌ನಂತೆ ಪ್ರತಿ ರೈತರಿಂದ ಗರಿಷ್ಠ 20 ಕ್ವಿಂಟಲ್ ಖರೀದಿ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.

ಬೀದರ್, ಧಾರವಾಡ, ದಾವಣಗೆರೆ, ಗದಗ, ವಿಜಯಪುರ, ಕಲಬುರಗಿ, ಚಿತ್ರದುರ್ಗ, ಕೊಪ್ಪಳ ಮತ್ತು ಬೆಳಗಾವಿ ಜಿಲ್ಲೆಯಲ್ಲಿ ಖರೀದಿ ಕೇಂದ್ರಗಳನ್ನು ಆರಂಭಿಸಲಾಗುವುದು ಎಂದು ಹೇಳಿದ್ದಾರೆ.

ADVERTISEMENT

ಖರೀದಿ ಪ್ರಕ್ರಿಯೆಯ ನಂತರ ರೈತರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಹಣ ಜಮೆ ಮಾಡಲಾಗುವುದು. ರೈತರು ಸಮೀಪದ ಪ್ರಾಥಮಿಕ ಪತ್ತಿನ ಸಹಕಾರ ಸಂಘ, ರೈತ ಉತ್ಪಾದಕರ ಕಂಪನಿ, ತಾಲ್ಲೂಕು ಹುಟ್ಟುವಳಿ ಸಹಕಾರ ಸಂಘಗಳಲ್ಲಿ ತಮ್ಮ ಫ್ರೂಟ್ಸ್‌ ಎಫ್ಐಡಿ ಸಂಖ್ಯೆ ನೀಡಿ ನೋಂದಣಿ ಮಾಡಿಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.