ADVERTISEMENT

ನಿಯಮಗಳ ಅನುಸಾರವೇ ಎಲ್‌ಐಸಿಯಿಂದ ಹೂಡಿಕೆ: ಕೇಂದ್ರ

ಪಿಟಿಐ
Published 7 ಫೆಬ್ರುವರಿ 2023, 13:45 IST
Last Updated 7 ಫೆಬ್ರುವರಿ 2023, 13:45 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ನವದೆಹಲಿ (ಪಿಟಿಐ): ಭಾರತೀಯ ಜೀವ ವಿಮಾ ನಿಗಮವು (ಎಲ್‌ಐಸಿ) ತಾನು ಹೂಡಿಕೆಗಳನ್ನು ಮಾಡುವ ಸಂದರ್ಭದಲ್ಲಿ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡುತ್ತಿರುವುದಾಗಿ ತಿಳಿಸಿದೆ ಎಂದು ಕೇಂದ್ರ ಸರ್ಕಾರವು ಸಂಸತ್ತಿಗೆ ವಿವರಿಸಿದೆ.

ಅದಾನಿ ಸಮೂಹದ ಕಂಪನಿಗಳಲ್ಲಿ ಎಲ್‌ಐಸಿ ಮಾಡಿರುವ ಹೂಡಿಕೆಯ ಬಗ್ಗೆ ಕಳವಳಗಳು ವ್ಯಕ್ತವಾಗಿರುವ ಸಂದರ್ಭದಲ್ಲಿ ಕೇಂದ್ರ ಈ ವಿವರಣೆ ನೀಡಿದೆ. ಅದಾನಿ ಸಮೂಹದ ಸಾಲಪತ್ರಗಳು ಹಾಗೂ ಷೇರುಗಳಲ್ಲಿ ಒಟ್ಟು ₹ 35,917 ಕೋಟಿ ಹೂಡಿಕೆ ಮಾಡಿರುವುದಾಗಿ ಎಲ್‌ಐಸಿ ಈಚೆಗೆ ತಿಳಿಸಿದೆ.

‘ಎಲ್‌ಐಸಿ ಮಾಡಿರುವ ಹೂಡಿಕೆಗಳಿಗೆ ಸಂಬಂಧಿಸಿದ ಬಹುತೇಕ ವಿವರಗಳು ಈಗಾಗಲೇ ಸಾರ್ವಜನಿಕವಾಗಿ ಲಭ್ಯವಿವೆ’ ಎಂದು ಕೇಂದ್ರ ಹಣಕಾಸು ಖಾತೆ ರಾಜ್ಯ ಸಚಿವ ಭಾಗವತ್ ಕರಾಡ್ ಅವರು ರಾಜ್ಯಸಭೆಗೆ ಮಂಗಳವಾರ ಮಾಹಿತಿ ನೀಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.