
ಪ್ರಜಾವಾಣಿ ವಾರ್ತೆ
ಬೆಂಗಳೂರು: ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್‌ನ ಎಫ್‌ಎಂಸಿಜಿ ಅಂಗಸಂಸ್ಥೆ ರಿಲಯನ್ಸ್ ಕನ್ಸ್ಯೂಮರ್ ಪ್ರಾಡಕ್ಟ್ಸ್ ಲಿಮಿಟೆಡ್ (ಆರ್‌ಸಿಪಿಎಲ್) 75 ವರ್ಷಗಳಷ್ಟು ಹಳೆಯದಾದ ಎಸ್‌ಐಎಲ್ ಬ್ರ್ಯಾಂಡ್‌ಗೆ ಮರುಜೀವ ನೀಡಿದೆ. ಈ ಮೂಲಕ ಪ್ಯಾಕ್ ಮಾಡಲಾದ ಆಹಾರ ಉತ್ಪನ್ನಗಳ ಮಾರುಕಟ್ಟೆಯನ್ನು ಪ್ರವೇಶಿಸಿದೆ.
ಕಂಪನಿಯು ಎಸ್‌ಐಎಲ್ ಬ್ರ್ಯಾಂಡ್ ಅಡಿಯಲ್ಲಿ ನೂಡಲ್ಸ್, ಜಾಮ್, ಕೆಚಪ್, ಸಾಸ್‌ಅನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿದೆ ಎಂದು ಪ್ರಕಟಣೆ ತಿಳಿಸಿದೆ. ಮುಂದಿನ ದಿನಗಳಲ್ಲಿ ಹೆಚ್ಚು ಬೇಡಿಕೆ ಬರುವ, ಪ್ಯಾಕ್ ಮಾಡಲಾದ ಹೊಸ ಆಹಾರ ಉತ್ಪನ್ನಗಳನ್ನು ಮಾರುಕಟ್ಟೆಗೆ ತರಲು ಇದು ಬುನಾದಿಯಂತಿದೆ ಎಂದು ಹೇಳಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.