ನವದೆಹಲಿ: 2024–25ನೇ ಆರ್ಥಿಕ ವರ್ಷದ ಡಿಸೆಂಬರ್ ತ್ರೈಮಾಸಿಕದಲ್ಲಿ ರಿಲಯನ್ಸ್ ಇಂಡಸ್ಟ್ರೀಸ್ ಕಂಪನಿಯು ₹18,540 ಕೋಟಿ ನಿವ್ವಳ ಲಾಭ ಗಳಿಸಿದೆ.
ಕಳೆದ ಆರ್ಥಿಕ ವರ್ಷದ ಇದೇ ತ್ರೈಮಾಸಿಕದಲ್ಲಿ ಗಳಿಸಿದ ಲಾಭದ ಪ್ರಮಾಣಕ್ಕೆ ಹೋಲಿಸಿದರೆ ಶೇ 7.4ರಷ್ಟು ಹೆಚ್ಚಳವಾಗಿದೆ ಎಂದು ಕಂಪನಿಯು ಗುರುವಾರ ತಿಳಿಸಿದೆ.
ಒಟ್ಟು ವರಮಾನ ₹2.40 ಲಕ್ಷ ಕೋಟಿ ಆಗಿದೆ. ಹಿಂದಿನ ಆರ್ಥಿಕ ವರ್ಷದ ಇದೇ ಅವಧಿಯಲ್ಲಿ ₹.2.25 ಲಕ್ಷ ಕೋಟಿ ವರಮಾನಗಳಿಸಿತ್ತು. ಇದಕ್ಕೆ ಹೋಲಿಸಿದರೆ ಶೇ 6.7ರಷ್ಟು ಏರಿಕೆಯಾಗಿದೆ.
ಮೂರನೇ ತ್ರೈಮಾಸಿಕದಲ್ಲಿ ರಿಲಯನ್ಸ್ ಜಿಯೊದ ನಿವ್ವಳ ಲಾಭದಲ್ಲಿ ಶೇ 26ರಷ್ಟು ಹೆಚ್ಚಳವಾಗಿದ್ದು, ಒಟ್ಟು ₹6,861 ಕೋಟಿ ಗಳಿಸಿದೆ. ರಿಲಯನ್ಸ್ ರಿಟೇಲ್ ಲಾಭದಲ್ಲಿ ಶೇ 10ರಷ್ಟು ಏರಿಕೆಯಾಗಿದ್ದು, ₹3,458 ಕೋಟಿ ಗಳಿಸಿದೆ.
Cut-off box -
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.